
ಕೋಲಾರ ೦೮, ಡಿಸೆಂಬರ್ (ಹಿ.ಸ) :
ಆ್ಯಂಕರ್ : ಮುಂಜಾಗೃತ ಕ್ರಮವಾಗಿ ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿಂದು ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ, ಪರಿಶೀಲನೆ ನಡೆಸಿದರು. ರೌಡಿ ಆಸಾಮಿಗಳ ಇರುವಿಕೆಯ ಬಗ್ಗೆ ಹಾಗೂ ಇವರುಗಳು ರೌಡಿ ಕೃತ್ಯಗಳಲ್ಲಿ ಸಕ್ರಿಯವಾಗಿರುವ ಕುರಿತು ಖುದ್ದು ಪರಿಶೀಲನೆ ಮಾಡಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶಿವಾಂಶು ರಜಪೂತ್ ಮತ್ತು ಡಿವೈಎಸ್‌ಪಿ ವಿ.ಲಕ್ಷö್ಮಯ್ಯ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
ಏಕಕಾಲದಲ್ಲಿ ರಾಬರ್ಟ್ಸನ್‌ಪೇಟೆ, ಆಂಡ್ರಸನ್‌ಪೇಟೆ, ಬೆಮೆಲ್‌ನಗರ, ಉರಿಗಾಂ ಮತ್ತು ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದುಗಳಲ್ಲಿನ ೨೩ ರೌಡಿಗಳ ಮನೆಗಳ ಮೇಲೆ ೦೫ ಪೊಲೀಸ್ ಇನ್ಸ್ಪೆಕ್ಟರ್, ೧೫ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಮತ್ತು ೧೨೦ ಮಂದಿ ಪೊಲೀಸ್ ಸಿಬ್ಬಂದಿಗಳಿದ್ದ ೨೩ ತಂಡಗಳವರು ದಾಳಿ ನಡೆಸಿದರು. ರೌಡಿಗಳು ಇನ್ನೂ ರೌಡಿ ಕೃತ್ಯಗಳಲ್ಲಿ ಸಕ್ರಿಯವಾಗಿರುವ ಕುರಿತು ಪೊಲೀಸರು ಖುದ್ದು ಪರಿಶೀಲನೆ ನಡೆಸಿರುತ್ತಾರೆ.
ದಾಳಿಯ ಸಮಯದಲ್ಲಿ ರೌಡಿಗಳನ್ನು ಅಭಿಸಿಲ್ ಎಂಬುವರ ಮನೆಯಲ್ಲಿ ಹರಿತವಾದ ಆಯುಧ ಪತ್ತೆಯಾಗಿದ್ದು ಆತನನ್ನು ವಶಕ್ಕೆ ಪಡೆದುಕೊಂಡು ಆತನ ವಿರುದ್ದ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಶಸ್ತಾçಸ್ತç ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತz,ೆ ಇನ್ನೊಬ್ಬ ರೌಡಿ ಆಸಾಮಿಯಾದ ಬೋತ್ ರವರ ಮನೆಯಲ್ಲಿ ಗಾಂಜಾ ಮತ್ತು ಇತರೆ ಮಾದಕ ವಸ್ತುಗಳು ಪತ್ತೆಯಾಗಿದ್ದು, ಉರಿಗಾಂ ಪೊಲೀಸ್ ಠಾಣೆಯಲ್ಲಿ ಎಸ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿರುತ್ತದೆ.
ರೌಡಿ ಆಸಾಮಿಗಳು ಯಾವುದೇ ರೀತಿಯ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗವಹಿಸದಂತೆ, ಸಾರ್ವಜನಿಕರು ನೆಮ್ಮದಿಯ ಜೀವನ ನಡೆಸಲು ಅನುಕೂಲವಾಗುವಂತೆ, ಪೊಲೀಸರು ಮುಂಜಾಗೃತ ಕ್ರಮವಾಗಿ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ, ಖುದ್ದು ಪರಿಶೀಲನೆ ನಡೆಸಲಾಗಿದೆ. ರೌಡಿಗಳು ಯಾವುದೇ ರೀತಿಯ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗವಹಿಸುತ್ತಿರುವ ಕುರಿತು ಮಾಹಿತಿ ಬಂದಲ್ಲಿ ಅಂತಹವರ ವಿರುದ್ದ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ರಕ್ಷಣಾಧಿಕಾರಿ ಶಿವಾಂಶು ರಜಪೂತ್ ಅವರು ಎಚ್ಚರಿಕೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್