
ಕೊಪ್ಪಳ, 08 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ 2013 ರನ್ವಯ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಕೊಪ್ಪಳ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ -2025 ರ ಪ್ರಗತಿ ಪರಿಶೀಲನಾ (ಜಿಲ್ಲಾ ಮೇಲ್ವಿಚಾರಣ ಸಮಿತಿ) ಸಭೆಯನ್ನು ಡಿಸೆಂಬರ್ 10 ರಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಂಬ0ಧಿಸಿದ ಎಲ್ಲಾ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು 2025ರ ಅಕ್ಟೋಬರ್ ಅಂತ್ಯದವರೆಗಿನ ಸಂಪೂರ್ಣ ಪ್ರಗತಿ ವರದಿಯೊಂದಿಗೆ ಈ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಕರ್ನಾಟಕ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆ ಅಧಿನಿಯಮ 2013ರ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್