
ಮಾನವಿ, 08 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಾನವಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಪಿಎಮ್‌ಎನ್‌ಎಎಮ್ ಯೋಜನೆಯಡಿಯಲ್ಲಿ ಶಿಶಿಕ್ಷ ಮೇಳವನ್ನು ಮಾನವಿ ಪಟ್ಟಣದ ಬಸವ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 12ರ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.
ಈ ಶಿಶಿಕ್ಷ ಮೇಳದಲ್ಲಿ ಉದ್ದಿಮೆಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದು, ಶಿಶಿಕ್ಷ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವುದರಿಂದ ಐಟಿಐ ದ್ವಿತೀಯ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ಹಾಗೂ ಈಗಾಗಲೇ ಐಟಿಐ ಉತ್ತೀರ್ಣರಾದ ತರಬೇತಿದಾರರು ಮತ್ತು ಪಿಯುಸಿ ಹಾಗೂ ಪದವಿಯಲ್ಲಿ ಉತ್ತೀರ್ಣರಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಮಾನವಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್