ರಕ್ತ ದಾನಿಗಳ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ : ಡಾ. ಸುರೇಶ ಹಿಟ್ನಾಳ
ಕೊಪ್ಪಳ, 08 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ರಕ್ತದ ಬೇಡಿಕೆ ಹೆಚ್ಚುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ರಕ್ತದಾನಿಗಳ ಸಂಖ್ಯೆಯನ್ನು ಹೆಚ್ಚಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಡಾ. ಸುರೇಶ ಬಿ. ಇಟ್
need to increase the number of blood donors - Dr. Suresh Hitnala


ಕೊಪ್ಪಳ, 08 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ರಕ್ತದ ಬೇಡಿಕೆ ಹೆಚ್ಚುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ರಕ್ತದಾನಿಗಳ ಸಂಖ್ಯೆಯನ್ನು ಹೆಚ್ಚಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.

ಕೊಪ್ಪಳ ನಗರದ ಜಿಲ್ಲಾ ಪಂಚಾಯಿತಿ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಕೊಪ್ಪಳ ಶಾಖೆಯ 2024-25 ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಬ್ಲಡ್ ಬ್ಯಾಂಕ್ ನಿಂದಾಗಿ ಬಹಳ ಜನರಿಗೆ ಅನುಕೂಲವಾಗುತ್ತಿದೆ. ನಿರೀಕ್ಷೆ ಮೀರಿ ಶ್ರಮಿಸಿ, ರಕ್ತವನ್ನು ಸಂಗ್ರಹಿಸಲಾಗುತ್ತದೆ. ಆದರೆ, ಈ ಸಮಸ್ಯೆಯನ್ನು ನಿಗಿಸಲು ನಾವು ರಕ್ತದಾನಿಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕಾಗಿದೆ. ಇದಕ್ಕಾಗಿ ರೂಪಿತ ಮನೆಗೊಬ್ಬ ರಕ್ತದಾನಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವ ದಿಸೆಯಲ್ಲಿ ಪ್ರಯತ್ನ ಮಾಡೋಣ ಎಂದರು.

ಜನಸಂಖ್ಯೆಯ ಶೇಕಡಾ 1 ರಷ್ಟು ಜನರು ರಕ್ತದಾನ ಮಾಡಿದರೇ ಸಾಕಾಗಾತ್ತದೆ. ಆದರೆ, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 001 ರಷ್ಟು ರಕ್ತದಾನಿಗಳು ಇಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.

ಇದಲ್ಲದೆಯೂ ರೆಡ್ ಕ್ರಾಸ್ ಸಂಸ್ಥೆ ಸಾಕಷ್ಟು ಮಾನವೀಯ ಕಲ್ಯಾಣದ ಕಾರ್ಯಗಳನ್ನು ಮಾಡುತ್ತಿದೆ. ಯುತ್ ರೆಡ್ ಕ್ರಾಸ್, ಜೂನಿಯರ್ ರೆಡ್ ಕ್ರಾಸ್ ನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಬೇಕಾಗಿದೆ ಎಂದರು.

ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಿದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಕೊಪ್ಪಳ ಶಾಖೆಯ ಉಪಾಧ್ಯಕ್ಷ ವರ್ಣೀತ್ ನೇಗಿ ಅವರು ಮಾತನಾಡಿ, ಕೊಪ್ಪಳ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅದು ಇನ್ನು ಹೆಚ್ಚು ಹೆಚ್ಚು ಆಗಬೇಕಾಗಿದೆ ಎಂದರು. ಆರ್ಥಿಕ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ಗ್ರಾಮ ಸ್ಥಳೀಯ ಸಂಸ್ಥೆಗಳಿಂದ ದೊರೆಯುವ ನೆರವು ಕುರಿತು ಈಗಾಗಲೇ ಅಗತ್ಯ ಕ್ರಮವಹಿಸಲಾಗಿದ್ದು, ಈಗಗಾಲೇ ಕೆಲವೊಬ್ಬರು ನೀಡುತ್ತಿದ್ದಾರೆ ಎಂದರು.

ರಾಜ್ಯಕಾರ್ಯಕಾರಿ ಸಮಿತಿ ಸದಸ್ಯ ಶರದ್ ರೋಡಗಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಕೊಪ್ಪಳ ರೆಡ್ ಕ್ರಾಸ್ ಸಂಸ್ಥೆ ಇತರ ಜಿಲ್ಲೆಗಳಿಗಿಂತ ನೂರು ಹೆಜ್ಜೆ ಮುಂದಿದೆ. ಎಲ್ಲರೂ ಯುವ ಉತ್ಸಾಹಿಗಳಾಗಿದ್ದಾರೆ.

ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಕೊಪ್ಪಳದಲ್ಲಿ ರೆಡ್ ಕ್ರಾಸ್ ಸಂಸ್ಥೆ ಬೆಳೆಯುತ್ತಿರುವುದನ್ನು ನೋಡಿದರೇ ಅದು ಅಕ್ಕಪಕ್ಕದ ಜಿಲ್ಲೆಗಳನ್ನು ಬೆಳೆಸುವಷ್ಟು ಶಕ್ತಿಯುತವಾಗಿದೆ ಎಂದು ಎಂದು ಹೇಳಿದರು.

ರೆಡ್ ಕ್ರಾಸ್ ಸಂಸ್ಥೆಯ ಕೊಪ್ಪಳ ಶಾಖೆಯ ಪ್ರಧಾನಕಾರ್ಯದರ್ಶಿ ಮತ್ತು ರಾಜ್ಯ ಶಾಖೆಯ ಉಪಸಭಾಪತಿ ಡಾ. ಶ್ರೀನಿವಾಸ ಹ್ಯಾಟಿ ಅವರು, ವಾರ್ಷಿಕ ವರದಿಯನ್ನು ವಾಚನ ಮಾಡಿದರು. ಗೌರವ ಕೋಶಾಧ್ಯಕ್ಷ ಸುಧೀರ ಅವರಾದಿ ಅವರು ಲೆಕ್ಕಪತ್ರ ವಾಚನ ಮಾಡಿದರು. ಕೊಪ್ಪಳ ಜಿಲ್ಲಾ ಶಾಖೆಯ ಸಭಾಪತಿ ಸೋಮರಡ್ಡಿ ಅಳವಂಡಿ ಅವರು ಪ್ರಸ್ಥಾವಿಕವಾಗಿ ಮಾತನಾಡಿ, ರೆಡ್ ಕ್ರಾಸ್ ಕೊಪ್ಪಳ ಶಾಖೆಯ ಸಾಧನೆಗಳು ಹಾಗೂ ಕನಸುಗಳ ಕುರಿತು ವಿವರಿಸಿದರು.

ಮಹಾಪೆÇೀಷಕರಾದ ಶ್ರೀನಿವಾಸ ಗುಪ್ತಾ, ಬಸವರಾಜ ಪುರದ, ಬಿ.ಎಸ್. ಪಾಟೀಲ್, ಆರ್.ಬಿ. ಪಾನಘಂಟಿ, ಎಸ್. ಆರ್. ಪಾಟೀಲ್, ಸುರೇಶ ಭೂಮರಡ್ಡಿ, ಕೃಷ್ಣಾ ಉಕ್ಕುಂದ, ಕೃಷ್ಣಮೂರ್ತಿ, ರಾಘವೇಂದ್ರ ಪೆÇೀತೆದಾರ, ರಾಮಣ್ಣ ಹಳ್ಳಿಗುಡಿ ಅವರನ್ನು ಹಾಗೂ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡಿದ ಸಂಘ, ಸಂಸ್ಥೆಗಳು, ಕಾಲೇಜುಗಳು, ಗ್ರಾಮ ಪಚಾಯಿತಿಗಳ ಪ್ರತಿನಿಧಿಗನ್ನು ಮತ್ತು ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು.

ಉಪಸಭಾಪತಿಗಳಾದ ಡಾ. ಸಿ.ಎಸ್. ಕರಮುಡಿ, ಮಂಜುನಾಥ ಸಜ್ಜನ, ಡಾ. ಗವಿ ಪಾಟೀಲ್, ಡಾ. ಶಿವನಗೌಡ ದಾನರಡ್ಡಿ ಇದ್ದರು. ಶ್ರೀಮತಿ ಮಲ್ಲಿಕಾ ಪ್ರಾರ್ಥನಾ ಗೀತೆ ಹಾಡಿದರು. ರಮೇಶ ತುಪ್ಪದ ಸ್ವಾಗತಿಸಿದರೇ ರಾಜೇಶ ಯಾವಗಲ್ ಮತ್ತು ಡಾ. ಶಿವನಗೌಡ ಅವರು ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಡಾ. ರವಿ ದಾನಿ ಅವರು ವಂದನಾರ್ಪಣೆ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande