
ಕೋಲಾರ, ೦೯ ಡಿಸೆಂಬರ್ (ಹಿ.ಸ) :
ಆ್ಯಂಕರ್ : ರಾಜ್ಯದ ರೈತ ಸಮುದಾಯ ಸಂಕಷ್ಟದಲ್ಲಿದೆ. ಅತಿವೃಷ್ಠಿ ಮತ್ತು ಅನಾವೃಷ್ಟಿಯಿಂದ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಬದಲು ರಾಜ್ಯ ಸರ್ಕಾರ ಅಧಿಕಾರದ ಅಮಲಿನಲ್ಲಿ ರೈತರನ್ನು ನಿರ್ಲಕ್ಷö್ಯ ಮಾಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಅಧಿಕಾರಕ್ಕಾಗಿ ಕಚ್ಚಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತರಿಗೆ ನೆರವಾಗಲು ಬಿಜೆಪಿ ಚಾಮರಾಜನಗರ ಜಿಲ್ಲೆಯಿಂದ ಹಿಡಿದು ಬೀದರ್ ತನಕ ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದೆ. ರಾಜ್ಯ ಸರ್ಕಾರ ಅಧಿಕಾರದಿಂದ ನಿರ್ಗಮಿಸುವ ತನಕ ಮುಂದುವರೆಯಲಿದೆ ಎಂದು ಕೋಲಾರದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ರಾಜ್ಯ ಸರ್ಕಾರವು ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ವಹಿಸುವಂತೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಮೆಕ್ಕೆ ವೃತ್ತದಲ್ಲಿ ಜಮಾಗೊಂಡ ಬಿಜೆಪಿ ಮತ್ತು ರೈತ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ ನಂತರ ಎತ್ತಿನ ಬಂಡೆಗಳ ಜೊತೆಗೆ ಮೆರವಣಿಗೆ ಮೂಲಕ ತೋಟಗಾರಿಕೆ ಇಲಾಖೆಯ ಮುಂದೆ ಪ್ರತಿಭಟನೆ ನಡೆಸಿ ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಬಿಜೆಪಿ ಪಕ್ಷದ ರಾಜ್ಯ ವಕ್ತಾರ ಅಶ್ವಥ್ ನಾರಾಯಣ್ ಮಾತನಾಡಿ ರಾಜ್ಯಾದ್ಯಂತ ಪ್ರಕೃತಿ ವಿಕೋಪಗಳಿಂದ ರೈತರು, ಹಾಲು ಉತ್ಪಾದಕರು ಹಾಗೂ ಕೃಷಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ರಾಜ್ಯದ ಕಾಂಗ್ರೆಸ್ ಸರ್ಕಾರವು ಪರಿಹಾರ ಧನವನ್ನು ಕೂಡಲೇ ಅವರ ಖಾತೆಗೆ ಜಮಾ ಮಾಡಬೇಕು ರೈತರ ಪ್ರತಿ ಲೀಟರ್ ಹಾಲಿನ ೫ ರೂ. ಪ್ರೊತ್ಸಾಹಧನ ೬೨೦ ಕೋಟಿ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು ಹಾಗೂ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತೆ ಹಾಲಿನ ಪ್ರೊತ್ಸಾಹ ಧನವನ್ನು ೫ ರಿಂದ ೭ ರೂಪಾಯಿಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು
ಮಾಜಿ ಸಂಸದ ಎಸ್ ಮುನಿಸ್ವಾಮಿ ಮಾತನಾಡಿ ಹಿಂದಿನAತೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಭಾಗವಾಗಿ ಸರ್ಕಾರದಿಂದಲೇ ಪ್ರತಿ ರೈತರಿಗೆ ೪,೦೦೦ ಹಣ ನೇರವಾಗಿ ಜಮಾ ಮಾಡುವ ವ್ಯವಸ್ಥೆಯನ್ನು ಪುನಃ ಜಾರಿಗೆ ತರಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಯಲ್ಲಿದ್ದ ೨೫,೦೦೦ ಶುಲ್ಕದಲ್ಲಿ ರೈತರಿಗೆ ವಿದ್ಯುತ್ ಟ್ರಾನ್ಸ್ಫಾರ್ಮರ್ ಮತ್ತು ಶಾಶ್ವತ ವಿದ್ಯುತ್ ಸೌಕರ್ಯ ನೀಡುವ ವಿಶೇಷ ಯೋಜನೆ ಪುನಃ ಪ್ರಾರಂಭಿಸಬೇಕು. ರೈತರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವ ಯೋಜನೆಯನ್ನು ಬಲಪಡಿಸಬೇಕು ಪ್ರತಿ ರೈತನಿಗೂ ಗರಿಷ್ಠ ೧೦ ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ ಸೌಲಭ್ಯ ಕಲ್ಪಿಸಬೇಕು ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ತೋಟಗಾರಿಕೆ ಮತ್ತು ಕೃಷಿ ಇಲಾಖೆ ಕಛೇರಿಗಳಿಗೆ ಬೀಗ ಜಡಿದು ಧರಣಿ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು
ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ಮಾತನಾಡಿ ಸಿದ್ದರಾಮಯ್ಯ ಸರ್ಕಾರವು ಸದನದಲ್ಲಿ ಚರ್ಚಿಸಿ ಕೂಡಲೇ ಕೃಷಿ ಸಲಕರಣೆಗಳನ್ನು ಸಬ್ಸಿಡಿ ದರದಲ್ಲಿ ದೊರಕುವಂತೆ ಹೆಚ್ಚಿನ ಅನುದಾನ ಮೀಸಲಿಡಬೇಕು. ವಿಶೇಷವಾಗಿ ಸಣ್ಣ ಮತ್ತು ಅಲ್ಪ ಭೂದಾರ ರೈತರಿಗೆ ಹೆಚ್ಚುವರಿ ಸಬ್ಸಿಡಿ ನೀಡಿ, ತಾಲೂಕು ಮತ್ತು ಜಿಲ್ಲಾ ಮಟ್ಟದ ಕೃಷಿ ಯಂತ್ರೋಪಕರಣ ಕೇಂದ್ರಗಳ ಮೂಲಕ ಪಾರದರ್ಶಕವಾಗಿ ವಿತರಣೆ ಮಾಡುವ ವ್ಯವಸ್ಥೆಯನ್ನು ಬಲಪಡಿಸುವಂತೆ ಆಗ್ರಹಿಸಿದ್ದಾರೆ.
ರಾಜ್ಯಾದ್ಯಂದ ಕಬ್ಬು ಬೆಳೆಗಾರರಿಗೆ ಕಾಂಗ್ರೆಸ್ ಸರ್ಕಾರವು ಪ್ರತಿ ಟನ್‌ಗೆ ರೂ.೩,೩೦೦ ಮೌಲ್ಯವನ್ನು ನಿಗದಿ ಪಡಿಸಿದ್ದು, ಈ ದರವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸಕ್ಕರೆ ಕಾರ್ಖಾನೆಗಳ ಮೂಲಕ ಸಮಾನವಾಗಿ ಜಾರಿಗೆ ತರುವ ಕಾರ್ಯವಿಧಾನ ಸ್ಪಷ್ಟವಾಗಿಲ್ಲ. ಒಂದು ಜಿಲ್ಲೆಯಲ್ಲಿ ಕಡಿಮೆ ದರ, ಇನ್ನೊಂದು ಜಿಲ್ಲೆಯಲ್ಲಿ ಹೆಚ್ಚಿನ ದರ ನೀಡುವ ಅನ್ಯಾಯಗಳನ್ನು ತಪ್ಪಿಸಲು, ಪ್ರತಿ ಟನ್‌ಗೆ ರೂ. ೩,೩೦೦ ದರವನ್ನು ಎಲ್ಲೆಡೆ ಕಡ್ಡಾಯವಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು
ಪ್ರತಿಭಟನೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ, ಮುಖಂಡರಾದ ಸಿ.ಎಸ್ ವೆಂಕಟೇಶ್, ಎಸ್.ಬಿ ಮುನಿವೆಂಕಟಪ್ಪ, ಮಾಗೇರಿ ನಾರಾಯಣಸ್ವಾಮಿ, ಕೆಂಬೋಡಿ ನಾರಾಯಣಸ್ವಾಮಿ, ಶಿವಣ್ಣ, ಸೀಗೆಹಳ್ಳಿ ಸುಂದರ್, ವಿಜಯಕುಮಾರ್, ಮಮತಾ, ಕೃಷ್ಣಪ್ಪ, ಚಿನ್ನಸ್ವಾಮಿಗೌಡ, ತಿಮ್ಮರಾಯಪ್ಪ ಭಾಗವಹಿಸಿದ್ದರು.
ಚಿತ್ರ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ ಕೋಲಾರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್