
ಬೆಳಗಾವಿ, 09 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕಾಪ್ರಹಾರ ನಡೆಸಿದರು.
ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರೈತರ ಬಗ್ಗೆ ಬಿಜೆಪಿಯವರಿಗೆ ಕರುಣೆ ಬಂದ ಹಾಗೆ ಇದೆ. ರೈತರ ಪರವಾಗಿ ಬಿಜೆಪಿ ಯವರು ಏನು ಮಾಡಿದ್ದಾರೆ ಅಂತ ಒಂದು ಪಟ್ಟಿ ಬಿಡುಗಡೆ ಮಾಡಲಿ. ಅವರಿಗೆ ನಾಚಿಕೆ ಆಗಬೇಕು. ರೈತರ ಮೇಲೆ ಗೋಲಿಬಾರ್ ಮಾಡಿಸಿದವರು, ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಚಳಿ, ಮಳೆಯಲ್ಲಿ ನೂರಾರು ಜನ ರೈತರು ಸತ್ತರು. ರೈತರ ಮೇಲೆ ಗಾಡಿ ಹತ್ತಿಸಿದವರು ಯಾರು? ಈಗ ರೈತರ ಬಗ್ಗೆ ಮಾತನಾಡಲು ಬರುತ್ತಾರೆ, ಅವರಿಗೆ ನಾಚಿಕೆಯಾಗಬೇಕು ಎಂದು ಹೇಳಿದರು.
ಟಿಪ್ಪು ಜಯಂತಿ ಆಚರಣೆ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮದು ಜಾತ್ಯತೀತ ಸರ್ಕಾರ, ಬಸವಣ್ಣ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬಾಬಾ ಸಾಹೇಬ ಅಂಬೇಡ್ಕರ್, ಮಹಾತ್ಮಾ ಗಾಂಧೀಜಿ ಸೇರಿದಂತೆ ಅನೇಕ ಮಹನೀಯರ ಜಯಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಟಿಪ್ಪು ಜಯಂತಿಯನ್ನು ಯಾಕೆ ವಿವಾದ ಮಾಡಲಾಗುತ್ತಿದೆ ಎಂದು ತಿಳಿಯುತ್ತಿಲ್ಲ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕೆನ್ನುವುದು ನಮ್ಮ ನಿಲುವು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa