
ವಿಜಯಪುರ, 09 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಬಿಎಡ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗು ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 25 ಸಾವಿರ ರೂ. ವಿಶೇಷ ಪ್ರೋತ್ಸಾಹ ಧನ ಪ್ರತಿ ವರ್ಷ ಗರಿಷ್ಠ 2 ವರ್ಷಕ್ಕೆ ಮಾತ್ರ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳುಗೆ ಸೇವಾ ಸಿಂಧುವಿನ ಪೋರ್ಟಲ್ https://sevashindhu.karnataka.gov.in ಮೂಲಕ ದಿನಾಂಕ : 31-12-2025ರೊಳಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳೊಂದಿಗೆ ಪ್ರತಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಜಯಪುರ ಕಚೇರಿಗೆ ಸಲ್ಲಿಸಬೇಕು.
ಅರ್ಹತೆ, ಸಲ್ಲಿಸಬೇಕಾದ ದಾಖಲೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ದೂ: 08352-295523, ತಾಲೂಕಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ವಿಜಯಪುರ ಮೊ: 8123710766, ಬಸವನಬಾಗೇವಾಡಿ ಮೊ: 9972340721, ಮುದ್ದೇಬಿಹಾಳ ಮೊ: 8722445552, ಇಂಡಿ ಮೊ: 9900109759 ಹಾಗೂ ಸಿಂದಗಿ ಮೊ: 9035558609 ಸಂಖ್ಯೆಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande