ಮುಟ್ಟಿನ ರಜೆ ಆದೇಶಕ್ಕೆ ತಾತ್ಕಾಲಿಕ ತಡೆಗೆ ತಿದ್ದುಪಡಿ ಮಾಡಿದ ಹೈಕೋರ್ಟ್
ಬೆಂಗಳೂರು, 09 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ (ಋತುಚಕ್ರ) ರಜೆ ನೀಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಇಂದು ಬೆಳಿಗ್ಗೆ ನೀಡಿದ್ದ ತಾತ್ಕಾಲಿಕ ತಡೆಯಾಜ್ಞೆಯನ್ನು ಮಧ್ಯಾಹ್ನ ತಿದ್ದುಪಡಿ ಮಾಡಿದ್ದು ಇದರಿಂದ ಸರ್ಕಾರದ ಆದೇಶ ಜಾರಿಗೆ ನೀಡಲಾಗ
High court


ಬೆಂಗಳೂರು, 09 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ (ಋತುಚಕ್ರ) ರಜೆ ನೀಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಇಂದು ಬೆಳಿಗ್ಗೆ ನೀಡಿದ್ದ ತಾತ್ಕಾಲಿಕ ತಡೆಯಾಜ್ಞೆಯನ್ನು ಮಧ್ಯಾಹ್ನ ತಿದ್ದುಪಡಿ ಮಾಡಿದ್ದು ಇದರಿಂದ ಸರ್ಕಾರದ ಆದೇಶ ಜಾರಿಗೆ ನೀಡಲಾಗಿದ್ದ ತಡೆಯಾಜ್ಞೆ ತೆರವುಗೊಂಡಿದೆ.

ಮಂಗಳವಾರ ಬೆಳಿಗ್ಗೆ ಹೋಟೆಲ್ ಉದ್ಯಮಿಗಳ ಸಂಘದ ಅರ್ಜಿಯನ್ನು ವಿಚಾರಣೆ ಮಾಡಿದ ಏಕಸದಸ್ಯ ಪೀಠ, ಸರ್ಕಾರ ಹೊರಡಿಸಿದ್ದ ಮುಟ್ಟಿನ ರಜೆ ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ಸಂಘದ ಪರ ವಕೀಲ ಪ್ರಶಾಂತ್ ಬಿ.ಕೆ ಅವರು, ಸರ್ಕಾರದ ಏಕಪಕ್ಷೀಯ ಆದೇಶದಿಂದ ಹೋಟೆಲ್‌ಗಳಿಗೆ ಕೆಲಸದ ವ್ಯವಸ್ಥಾಪನದಲ್ಲಿ ತೊಂದರೆ ಉಂಟಾಗಿದೆ. ಆದೇಶ ಹೊರಡಿಸುವ ಮೊದಲು ಸಂಬಂಧಿತ ಸಂಘಟನೆಗಳ ಅಭಿಪ್ರಾಯ ಪಡೆಯಲಾಗಿಲ್ಲ ಎಂದು ವಾದಿಸಿದ್ದರು.

ಬೆಳಗಿನ ತಡೆಯಾಜ್ಞೆ ನಂತರ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ತುರ್ತು ಮನವಿ ಸಲ್ಲಿಸಿ ಸರ್ಕಾರದ ವಾದವನ್ನು ಆಲಿಸದೆ ತಡೆಯಾಜ್ಞೆ ನೀಡಲಾಗಿದೆ. ಮುಟ್ಟಿನ ರಜೆ ಕುರಿತ ಆದೇಶ ಹೊರಡಿಸುವಲ್ಲಿ ಸರ್ಕಾರ ಕಾನೂನು ಕ್ರಮಗಳನ್ನು ಪಾಲಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಸರ್ಕಾರದ ಮನವಿಯನ್ನು ಪರಿಗಣಿಸಿದ ಹೈಕೋರ್ಟ್, ಎರಡೂ ಪಕ್ಷಗಳ ವಾದಗಳನ್ನು ಆಲಿಸಿದ ಬಳಿಕವೇ ಅಂತಿಮ ಆದೇಶ ಎಂದು ಸ್ಪಷ್ಟಪಡಿಸಿ ಬೆಳಗಿನ ತಾತ್ಕಾಲಿಕ ತಡೆಯಾಜ್ಞೆಯನ್ನು ತಿದ್ದುಪಡಿ ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನಾಳೆ (ಬುಧವಾರ) ನಿಗದಿಪಡಿಸಲಾಗಿದೆ.

ಹೀಗಾಗಿ, ರಾಜ್ಯ ಸರ್ಕಾರ ಹೊರಡಿಸಿದ್ದ ಮಟ್ಟಿನ (ಋತುಚಕ್ರ) ರಜೆ ಆದೇಶಕ್ಕೆ ಸದ್ಯಕ್ಕೆ ಯಾವುದೇ ತಡೆ ಜಾರಿಯಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande