ಬಿಹಾರ ಗೆಲುವಿಗೆ ಎನ್‌ಡಿಎ ಸಂಸದರಿಂದ ಪ್ರಧಾನಿಗೆ ಅಭಿನಂದನೆ
ನವದೆಹಲಿ, 09 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸಾಧಿಸಿದ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ಮಂಗಳವಾರ ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪಕ್ಷದ ಎಲ್ಲ ಸಂಸದರು ವಿಶ
Honour


ನವದೆಹಲಿ, 09 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸಾಧಿಸಿದ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ಮಂಗಳವಾರ ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪಕ್ಷದ ಎಲ್ಲ ಸಂಸದರು ವಿಶೇಷ ಅಭಿನಂದನೆ ಸಲ್ಲಿಸಿದರು.

ಸಂಸದರಾದ ಉಪೇಂದ್ರ ಕುಶ್ವಾಹ, ರಾಜೀವ್ ರಂಜನ್ ಸೇರಿದಂತೆ ಅನೇಕರು ಪ್ರಧಾನಿಯವರನ್ನು ಹಾರ ಹಾಕಿ ಬರಮಾಡಿಕೊಂಡರು. ಸಂಸತ್ತಿನ ಗ್ರಂಥಾಲಯ ಕಟ್ಟಡದ ಜಿಎಂಸಿ ಬಾಲಯೋಗಿ ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ ಪ್ರಧಾನಿ ಮೋದಿ ಸಂಸದರನ್ನು ಉದ್ದೇಶಿಸಿ ಮಾತನಾಡಿ, ಜನಮತಕ್ಕೆ ಧನ್ಯವಾದ ಅರ್ಪಿಸಿದರು.

ಸಭೆಯಲ್ಲಿ ಚುನಾವಣೆ ಸುಧಾರಣೆ ಕುರಿತ ಮುಂದುವರೆದ ಅಭಿಯಾನ, ಹಾಗೂ ಮುಂಬರುವ ಚುನಾವಣೆಗಳ ತಂತ್ರದ ಕುರಿತು ಸಂಕ್ಷಿಪ್ತ ಚರ್ಚೆ ಜರುಗಿದೆಯೆಂದು ಮೂಲಗಳು ತಿಳುಸಿವೆ. ಇದೇ ಸಂದರ್ಭದಲ್ಲಿ ಪ್ರಧಾನಿಯವರು ಸಂಸದರಿಗೆ ಅಗತ್ಯ ಮಾರ್ಗದರ್ಶನ ನೀಡಿದರು.

ಮೂಲಗಳ ಪ್ರಕಾರ, ಡಿಸೆಂಬರ್ 11ರಂದು ನಡೆಯಲಿರುವ ಭೋಜನ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಮೋದಿ ಅವರು ಎನ್‌ಡಿಎ ಸಂಸದರೊಂದಿಗೆ ಮುಂದಿನ ಚುನಾವಣಾ ತಯಾರಿ ಮತ್ತು ರಾಜಕೀಯ ಪರಿಸ್ಥಿತಿಗಳ ಬಗ್ಗೆ ಸವಿಸ್ತಾರ ಚರ್ಚೆ ನಡೆಸುವ ಸಾಧ್ಯತೆಯಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande