
ವಿಜಯಪುರ, 09 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನಲ್ಲಿ 1ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕವನ್ನು 31-01-2026ರವರೆಗೆ ವಿಸ್ತರಿಸಲಾಗಿದೆ.ಅರ್ಹರು https://ssp.postmatric.karnataka.gov.in ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ https://dom.karnataka.gov.in ಹಾಗೂ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande