
ಬೆಂಗಳೂರು, 09 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ೭೯ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರ ಜನ್ಮದಿನಕ್ಕೆ ಪ್ರಧಾನಮಂತ್ರಿ ಸೇರಿದಂತೆ ಹಲವರು ಶುಭಾಶಯ ಕೋರಿದ್ದಾರೆ.
ಪ್ರಧಾನಮಂತ್ರಿ ಮೋದಿ ಎಕ್ಸ ಖಾತೆಯಲ್ಲಿ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಸಿಗಲಿ ಎಂದು ಹಾರೈಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ,
ಕಾಂಗ್ರೆಸ್ ಪಕ್ಷದ ವರಿಷ್ಠರು, ನಮ್ಮೆಲ್ಲರ ಮಾರ್ಗದರ್ಶಕರು ಆದ ಶ್ರೀಮತಿ ಸೋನಿಯಾ ಗಾಂಧಿಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ದೀರ್ಘ ಆಯಸ್ಸು, ಆರೋಗ್ಯದ ಭಾಗ್ಯ ನಿಮ್ಮದಾಗಲಿ ಎಂದು ಮನದುಂಬಿ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಮ್ಮ ನಿರಂತರ ಬೆಂಬಲದ ಆಧಾರಸ್ತಂಭ ಶ್ರೀಮತಿ ಸೋನಿಯಾ ಗಾಂಧಿ ಅವರು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ನಿಸ್ವಾರ್ಥ ಸೇವೆ, ಬುದ್ಧಿವಂತಿಕೆ ಮತ್ತು ದೃಷ್ಟಿಕೋನವು ಕಾಂಗ್ರೆಸ್ ಅನ್ನು ರೂಪಿಸಿದೆ ಮತ್ತು ಜನರಿಗೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪವನ್ನು ಬಲಪಡಿಸಿದೆ. ನನ್ನ ಪ್ರಯಾಣದುದ್ದಕ್ಕೂ ನೀವು ನನ್ನ ಮೇಲೆ ತೋರಿಸಿದ ನಿಮ್ಮ ಮಾರ್ಗದರ್ಶನ ಮತ್ತು ನಂಬಿಕೆಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ನೀವು ಉತ್ತಮ ಆರೋಗ್ಯ ಮತ್ತು ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಲು ನಿರಂತರ ಶಕ್ತಿಯನ್ನು ನೀಡಲಿ ಮತ್ತು ಸಮರ್ಪಣಾಭಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸಲು ನಮ್ಮೆಲ್ಲರಿಗೂ ಸ್ಫೂರ್ತಿ ನೀಡಲಿ ಎಂದು ಶುಭಾಶಯ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa