

ಬಳ್ಳಾರಿ, 09 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ ಇವರ ಸಹಯೋಗದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಡಿಸೆಂಬರ್ 10 ರಂದು ಬುಧವಾರ ಬೆಳಿಗ್ಗೆ 9.30 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರ ಶೇಖರ ಸಿ. ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಅಧ್ಯಕ್ಷತೆವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಗೌರವಾನ್ವಿತ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಡಿ.ಕೆ., ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರಗದ, ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಸಿ.ಜೆ.ಎಂ ಮಲಕಾರಿ ರಾಮಪ್ಪ ಒಡೆಯರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ. ಕಣವಿ, ಜಿಲ್ಲಾ ಸರ್ಕಾರಿ ವಕೀಲರಾದ ಅಪರ್ಣಾ ಬಂಡಿ ಅವರು ಪಾಲ್ಗೊಳ್ಳುವರು.
ಕಾರ್ಯಕ್ರಮದ ಅಂಗವಾಗಿ ಕುಕನೂರು ತಾಲ್ಲೂಕಿನ ಮಂಗಳೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಹ ಪ್ರಾಧ್ಯಾಪಕರಾದ ಡಾ. ಪ್ರಭುರಾಜ್ ನಾಯಕ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್