ಬೆಂಗಳೂರು, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರನ್ಯಾ ರಾವ್ ಗೆ 15 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ವಿಚಾರಣೆಗಾಗಿ ಡಿಆರ್ಐ ಅಧಿಕಾರಿಗಳ ವಶದಲ್ಲಿದ್ದ ರನ್ಯಾರ ಮೂರು ದಿನಗಳ ಕಸ್ಟಡಿ ಅವದಿ ಅಂತ್ಯಗೊಂಡ ಹಿನ್ನೆಲೆ ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯದಲ್ಲಿ, ನನಗೆ ಮಾನಸಿಕ ಹಿಂಸೆ ಆಗುತ್ತಿದೆ ಎಂದು ನಟಿ ರನ್ಯಾ ನ್ಯಾಯಾಧೀಶರ ಎದುರು ಅಳಲು ತೋಡಿಕೊಂಡಿದ್ದಾರೆ. ಇತ್ತ ಡಿಆರ್ಐ ಅಧಿಕಾರಿಗಳು ವಿಚಾರಣೆ ಬಾಕಿ ಇದ್ದು ಮತ್ತೆ ರನ್ಯಾ ಅವರನ್ನು ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಾದ-ವಿವಾದ ಆಲಿಸಿದ ನ್ಯಾಯಾಧೀಶರು, ನಟಿ ರನ್ಯಾ ರಾವ್ ಅವರನ್ನು 15 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa