ರಾಯಚೂರು, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಿಗೆ ಶುಲ್ಕ ಮರು ಪಾವತಿ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಅವಧಿ ಮಾ.15ರವರೆಗೆ ವಿಸ್ತರಣೆ ಮಾಡಲಾಗಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ: http://ssp.postmatric.karnataka.gov.in/ ನಲ್ಲಿ ಮಾ.15ರೊಳಗಾಗಿ ಸಲ್ಲಿಸಬಹುದಾಗಿದೆ.
ಕಾರ್ಯಕ್ರಮಗಳ ವಿವರ, ಅರ್ಹತೆಗಾಗಿ ವೆಬ್ ಸೈಟ್ ವಿಳಾಸ: http://bcwd.karnataka.gov.in ಮಾಹಿತಿಗಾಗಿ ಬೇಟಿ ನೀಡಬಹುದಾಗಿದೆ. ಅಥವಾ ಇಲಾಖೆ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್