ಛತ್ತೀಸ್‌ಗಢ : ಮಾಜಿ ಮುಖ್ಯಮಂತ್ರಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ
ರಾಯ್‌ಪುರ, 10 ಮಾರ್ಚ್ (ಹಿ.ಸ.) : ಆ್ಯಂಕರ್ : ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಶ್ ಬಘೇಲ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ತಂಡ ಸೋಮವಾರ ಬೆಳಿಗ್ಗೆ ದಾಳಿ ನಡೆಸಿದೆ. ಅಧಿಕೃತ ಮಾಹಿತಿಯ ಪ್ರಕಾರ, ಇಡಿ ತಂಡವು ಭಿಲಾಯಿಯಲ್ಲಿರುವ ಭೂಪೇಶ
End raid


ರಾಯ್‌ಪುರ, 10 ಮಾರ್ಚ್ (ಹಿ.ಸ.) :

ಆ್ಯಂಕರ್ : ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಶ್ ಬಘೇಲ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ತಂಡ ಸೋಮವಾರ ಬೆಳಿಗ್ಗೆ ದಾಳಿ ನಡೆಸಿದೆ.

ಅಧಿಕೃತ ಮಾಹಿತಿಯ ಪ್ರಕಾರ, ಇಡಿ ತಂಡವು ಭಿಲಾಯಿಯಲ್ಲಿರುವ ಭೂಪೇಶ್ ಬಾಘೇಲ್ ಅವರ ನಿವಾಸ, ಅವರ ಪುತ್ರ ಚೈತನ್ಯ ಬಾಘೇಲ್ ಅವರ ಮನೆ ಮತ್ತು ರಾಜ್ಯಾದ್ಯಂತ ಒಟ್ಟು 14 ಸ್ಥಳಗಳಲ್ಲಿ ದಾಳಿ ಮಾಡಿದೆ.

ಇಡಿ ತಂಡಗಳು ರಾಯ್‌ಪುರ, ಭಿಲಾಯಿ ಮತ್ತು ಇತರ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿವೆ.

ಇಡಿ ಅಧಿಕಾರಿಗಳು ಭೂಪೇಶ್ ಬಾಘೇಲ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಅಕ್ರಮ ಹಣ ವರ್ಗಾವಣೆ ಮತ್ತು ಆರ್ಥಿಕ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇಡಿ ವಿಚಾರಣೆ ನಡೆಸುತ್ತಿದೆ.

ಮದ್ಯ ಹಗರಣ, ಕಲ್ಲಿದ್ದಲು ಹಗರಣ ಮತ್ತು ಮಹಾದೇವ್ ಸತ್ತಾ ಆಪ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರ ಹೆಸರು ಕೇಳಿಬಂದಿತ್ತು.

ಬಿಜೆಪಿಯ ಆದೇಶದ ಮೇರೆಗೆ ಇಡಿ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರ ಭಿಲಾಯಿ ನಿವಾಸದ ಮೇಲೆ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande