ಮಹಿಳಾ ಮೀಸಲಾತಿಗಾಗಿ ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ
ನವದೆಹಲಿ, 10 ಮಾರ್ಚ್ (ಹಿ.ಸ.) : ಆ್ಯಂಕರ್ : ಲೋಕ ಸಭೆ ಮತ್ತು ರಾಜ್ಯ ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿಯನ್ನು ತಕ್ಷಣ ಜಾರಿಗೆ ತರಬೇಕೆಂದು ಒತ್ತಾಯಿಸಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಮತ್ತು ಮಹಿಳಾ ಕಾಂಗ್ರೆಸ್‌ನ ಸದಸ್ಯರು ಸೋಮವಾರ ಜಂತರ್ ಮಂತರ್‌ನಲ್ಲಿ ಧ
Cong protest


ನವದೆಹಲಿ, 10 ಮಾರ್ಚ್ (ಹಿ.ಸ.) :

ಆ್ಯಂಕರ್ : ಲೋಕ ಸಭೆ ಮತ್ತು ರಾಜ್ಯ ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿಯನ್ನು ತಕ್ಷಣ ಜಾರಿಗೆ ತರಬೇಕೆಂದು ಒತ್ತಾಯಿಸಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಮತ್ತು ಮಹಿಳಾ ಕಾಂಗ್ರೆಸ್‌ನ ಸದಸ್ಯರು ಸೋಮವಾರ ಜಂತರ್ ಮಂತರ್‌ನಲ್ಲಿ ಧರಣಿ ನಡೆಸಿದರು.

ಸಂಸತ್ತಿನಲ್ಲಿ ಅಂಗೀಕಾರವಾದರೂ ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಅನುಷ್ಠಾನವನ್ನು ವಿಳಂಬ ಮಾಡುತ್ತಿದೆ ಎಂದು ಅಲ್ಕಾ ಲಂಬಾ ಆರೋಪಿಸಿದರು. ಈ ಕಾನೂನನ್ನು ಯುಪಿಎ ಸರ್ಕಾರ ಅಂಗೀಕರಿಸಿತ್ತು. ಆದರೆ ಎನ್ ಡಿಎ ಸರ್ಕಾರ ಅದನ್ನು ಹತ್ತು ವರ್ಷಗಳ ಕಾಲ ತಡೆಹಿಡಿದು, ಅದರ ಹೆಸರಿನಲ್ಲಿ ಮತ ಯಾಚಿಸಿದೆ ಎಂದು ಆರೋಪಿಸಿದ್ದು, ಮಹಿಳಾ ಮೀಸಲಾತಿ ಜಾರಿಗೆ ಬರುವವರೆಗೂ ಹೋರಾಟ ಮುಂದುವರೆಯಲಿದೆ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande