ಕೊಪ್ಪಳ, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024-25ನೇ ಸಾಲಿಗೆ ಕೇಂದ್ರ ಕಛೇರಿಯಿಂದ ಸರಬುರಾಜಾದ ಯುವ ಚೈತನ್ಯ ಕಿಟ್‍ಗಳನ್ನು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಜಿಲ್ಲೆಯ ಆಯ್ದ ಯುವ ಸಂಘಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ್ ಸೇರಿದಂತೆ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಶ್ರೀ ರಾಧಾಕೃಷ್ಣನ್ ಗ್ರಾಮೀಣ ಅಭಿವೃದ್ದಿ ಸಂಸ್ಥೆ ಮತ್ತು ಕಲ್ಯಾಣ ಸಂಸ್ಥೆ ಹಾಗೂ ಕ್ರೀಡಾ ಸಾಂಸ್ಕøತಿಕ ಸಂಘ ಹಾಗೂ ಬುಡಕುಂಟಿ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ಕ್ರೀಡೆ, ಸಾಂಸ್ಕøತಿಕ ಹಾಗೂ ಗ್ರಾಮೀಣಾಭಿವೃದ್ದಿ ಯುವಕ ಸಂಘ ಮತ್ತು ಗಂಗಾವತಿ (ಕಾರಟಗಿ) ತಾಲ್ಲೂಕಿನ ನವಲಿಯ ಶ್ರೀ ಸ್ವಾಮಿ ವಿವೇಕಾನಂದ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘಗಳಿಗೆ ಚೈತನ್ಯಕಿಟ್ ವಿತರಿಸಲಾಗಿದೆ ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್