ಉತ್ತರ ಪ್ರದೇಶ : ಭೀಕರ ರಸ್ತೆ ಅಪಘಾತ, ಐವರ ಸಾವು
ಬಸ್ತಿ, 10 ಮಾರ್ಚ್ (ಹಿ.ಸ.) : ಆ್ಯಂಕರ್ : ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 27 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಬೆಳಿಗ್ಗೆ 7 ಗಂಟೆ
Accident


ಬಸ್ತಿ, 10 ಮಾರ್ಚ್ (ಹಿ.ಸ.) :

ಆ್ಯಂಕರ್ : ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 27 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಕಾರು ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರು ಗುಜರಾತ್‌ನಿಂದ ಬಿಹಾರ ಮತ್ತು ಗೋರಖ್‌ಪುರಕ್ಕೆ ಹೋಗುತ್ತಿದ್ದರು. ಅಪಘಾತದಲ್ಲಿ ಕಾರಿನಲ್ಲಿದ್ದ ಐದು ಜನರು ಸಾವನ್ನಪ್ಪಿದ್ದಾರೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸ್ಥಳಿಯ ಪೋಲಿಸರು ರಕ್ಷಣಾ ಕಾರ್ಯಾ ಕೈಗೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande