ರಾಯಚೂರು, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ ಜಿಲ್ಲೆಯ ಆಸಕ್ತಿಯುಳ್ಳ ಅರ್ಹ ರೈತ ಮಕ್ಕಳಿಗೆ 10 ತಿಂಗಳ ಕಾಲ ತೋಟಗಾರಿಕೆ ತರಬೇತಿ ನಡೆಯಲಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತರಬೇತಿಯು ಕೊಪ್ಪಳ ತಾಲ್ಲೂಕಿನ ಮುನಿರಾಬಾದ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕನಿಷ್ಠ 18 ವರ್ಷ ಗರಿಷ್ಠ 33 ವರ್ಷ, ಇತರರಿಗೆ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗಧಿಪಡಿಸಲಾಗಿದೆ.
ಅಭ್ಯರ್ಥಿಗಳು ಕನ್ನಡ ವಿಷಯದೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ತರಬೇತಿ ಪ್ರವೇಶ ಬಯಸುವ ಅಭ್ಯರ್ಥಿಯ ತಂದೆ / ತಾಯಿ / ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು.
ಅರ್ಜಿಗಳನ್ನು ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ರಾಯಚೂರು ಕಚೇರಿ ಅಥವಾ https://horticulturedir.karnataka.gov.in ಮೂಲಕ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಏಪ್ರೀಲ್ 01ರ ಸಂಜೆ 05.30ಗಂಟೆಯೊಳಗೆ ಈ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್