ಬೆಂಗಳೂರು, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ರಾಜ್ಯ ಬಜೆಟ್ ಅಧಿವೇಶನ ಇಂದಿನಿಂದ ಪುನರಾರಂಭಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಮೇಲೆ ಇಂದು ಎರಡು ಸದನಗಳಲ್ಲಿ ಚರ್ಚೆ ನಡೆಲಿದ್ದು, ತುಷ್ಟಿಕರಣ ರಾಜಕಾರಣ, ದಲಿತರ, ಉತ್ತರ ಕರ್ನಾಟಕ ನಿರ್ಲಕ್ಷ್ಯ, ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ, ರೈತರ ಬವಣೆ ಇತ್ಯಾದಿ ವಿಚಾರಗಳೊಂದಿಗೆ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಲು ಪ್ರತಿಪಕ್ಷಗಳು ಸಜ್ಜಾಗಿವೆ.
ಇದೇ ವೇಳೆ ವಿರೋಧಪಕ್ಷಗಳ ಆರೋಪ, ಟೀಕೆಗಳಿಗೆ ಅಂಕಿ-ಅಂಶಗಳ ಸಮೇತ ತಿರುಗೇಟು ನೀಡಲು ಆಡಳಿತ ಪಕ್ಷ ಸಿದ್ದವಾಗಿದ್ದು ಮಾತಿನ ಕದನಕ್ಕೆ ಸದನ ಸಾಕ್ಷಿಯಾಗುವ ಸಾಧ್ಯತೆಗಳಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa