ಬೆಂಗಳೂರು, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ ಅಧ್ಯಕ್ಷತೆಯಲ್ಲಿ ವಿಧಾನ ಸೌಧದಲ್ಲಿ ಇಂದು ಸಭೆ ಜರುಗಿತು.
ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡಿ ಮೇಲ್ದರ್ಜೆಗೇರಿಸುವ ಸಂಬಂಧ ಪ್ರಸ್ತಾಪಿತ ಬೃಹತ್ ಮೈಸೂರು ಮಹಾನಗರ ಪಾಲಿಕೆಯ ಗಡಿ ಗುರುತಿಸಿ 2018 ರ ವಾರ್ಡ್ ಪುನರ್ ವಿಂಗಡನೆ ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಂತೆ ಇರುವ ನಗರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯಿತಿಗಳನ್ನು ವಿಲೀನ ಪಡಿಸಿಕೊಂಡು ಯೋಜನಾ ಬದ್ದ ಬೆಳವಣಿಗೆಗೆ ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ಅನುಮೋದನೆಯನ್ನು ಪಡೆದು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಬೈರತಿ ಸುರೇಶ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa