ನವದೆಹಲಿ, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಮಾರ್ಚ ೧೬ ರಿಂದ ೨೦ರವರೆಗೆ ಐದು ದಿನಗಳ ಅಧಿಕೃತ ಭೇಟಿಗಾಗಿ ಭಾರತಕ್ಕೆ ಆಗಮಿಸಲಿದ್ದಾರೆ. ಅವರೊಂದಿಗೆ ಸಚಿವರು, ಹಿರಿಯ ಅಧಿಕಾರಿಗಳು, ವ್ಯವಹಾರ, ಮಾಧ್ಯಮ ಮತ್ತು ನ್ಯೂಜಿಲೆಂಡ್‌ನಲ್ಲಿರುವ ಭಾರತೀಯ ವಲಸಿಗ ಸಮುದಾಯದ ಸದಸ್ಯರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಆಗಮಿಸಲಿದೆ.
ಇದು ಪ್ರಧಾನ ಮಂತ್ರಿಯಾಗಿ ಲಕ್ಸನ್ ಅವರ ಮೊದಲ ಭಾರತ ಭೇಟಿಯಾಗಲಿದೆ.
ಅವರು ಮಾರ್ಚ್ 20 ರಂದು ವೆಲ್ಲಿಂಗ್ಟನ್‌ಗೆ ಹಿಂತಿರುಗುವ ಮೊದಲು ನವದೆಹಲಿ ಮತ್ತು ಮುಂಬೈಗೆ ಭೇಟಿ ನೀಡಲಿದ್ದಾರೆ.
ತಮ್ಮ ಭೇಟಿಯ ಸಮಯದಲ್ಲಿ, ಪ್ರಧಾನಿ ಲಕ್ಸನ್ ಮಾರ್ಚ್ 17 ರಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಭಾರತ-ನ್ಯೂಜಿಲೆಂಡ್ ಸಂಬಂಧಗಳ ಅಂಶಗಳನ್ನು ಚರ್ಚಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಅತಿಥಿಯ ಗೌರವಾರ್ಥವಾಗಿ ಪ್ರಧಾನಿ ಮೋದಿ ಅವರು ಭೋಜನ ಕೂಟವನ್ನು ಆಯೋಜಿಸಲಿದ್ದಾರೆ. ಅದೇ ದಿನ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ.
ಪ್ರಧಾನ ಮಂತ್ರಿ ಲಕ್ಸನ್ ಮಾರ್ಚ್ 17 ರಂದು ನವದೆಹಲಿಯಲ್ಲಿ ನಡೆಯಲಿರುವ 10 ನೇ ರೈಸಿನಾ ಸಂವಾದ 2025 ರ ಉದ್ಘಾಟನಾ ಅಧಿವೇಶನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮುಖ್ಯ ಭಾಷಣ ಮಾಡಲಿದ್ದಾರೆ.
ಪ್ರಧಾನ ಮಂತ್ರಿ ಲಕ್ಸನ್ ಮಾರ್ಚ್ 19-20 ರಂದು ಮುಂಬೈಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಭಾರತೀಯ ವ್ಯಾಪಾರ ಮುಖಂಡರು ಮತ್ತು ವಿವಿಧ ವಲಯಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa