ಹೊಸಪೇಟೆ, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ಬಿಸಿಲಿನ ತಾಪಮಾನ ಹೆಚ್ಚಾದಂತೆ ದೇಹದಲ್ಲಿ ನಿರ್ಜಲೀಕರಣ ಸಮಸ್ಯೆ ಹೆಚ್ಚಾಗಲಿದ್ದು, ನೀರಿನ ದಾಹ ತಣಿಸಲು ಆರೋಗ್ಯ ಇಲಾಖೆಯಿಂದ ಕುಡಿಯುವ ನೀರಿನ ಅರವಟಿಗೆ ಸೇವೆಯನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಂಕರ್ ನಾಯ್ಕ ಅವರು ತಿಳಿಸಿದ್ದಾರೆ.
ಚಿತವಾಡ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಕುಡಿಯುವ ನೀರಿನ ಅರವಟ್ಟಿಗೆ ಉದ್ಘಾಟಿಸಿ ಸೋಮವಾರ ಮಾತನಾಡಿದರು.
ಹೃದ್ರೋಗಿಗಳು, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು, ನವಜಾತ ಶಿಶುಗಳು, ಚಿಕ್ಕ ಮಕ್ಕಳು, ಬಾಣಂತಿಯರು, ಹೊರಾಂಗಣದಲ್ಲಿ ಕೆಲಸ ಮಾಡುವ ಕಾರ್ಮಿಕರು ಹಾಗೂ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಬೇಸಿಗೆ ಕಾಲದಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ವಹಿಸಬೇಕು ಎಂದರು.
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ಬಸವರಾಜ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್