ನವದೆಹಲಿ, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ಲೋಕ ಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಸದನದಲ್ಲಿ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ವಿಷಯವನ್ನು ಪ್ರಸ್ತಾಪಿಸಿ, ದೇಶದಾದ್ಯಂತ ಈ ಬಗ್ಗೆ ದೂರುಗಳು ಬರುತ್ತಿವೆ, ಈ ಕುರಿತು ಚರ್ಚೆ ನಡೆಯಬೇಕೆಂದು ಆಗ್ರಹಿಸಿದರು.
ಲೋಕ ಸಭೆಯಲ್ಲಿ ಶೂನ್ಯ ವೇಳೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಈ ವಿಷಯವನ್ನು ಪ್ರಸ್ತಾಪಿಸಿ, ಸರ್ಕಾರ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದಿಲ್ಲ ಎಂಬುದು ನಿಜ, ಆದರೆ ಪ್ರತಿ ಪಕ್ಷವು ಈ ವಿಷಯವನ್ನು ಸದನದಲ್ಲಿ ಚರ್ಚಿಸಬೇಕೆಂದು ಬಯಸುತ್ತದೆ ಎಂದು ಹೇಳಿದರು.
ಪ್ರತಿ ಪಕ್ಷಗಳ ರಾಜ್ಯಗಳು ಮತ್ತು ದೇಶದಾದ್ಯಂತ ಮತದಾರರ ಪಟ್ಟಿಯ ಕುರಿತು ಪ್ರಶ್ನೆಗಳು ಎದ್ದಿವೆ. ಪ್ರತಿ ಪಕ್ಷವು ಸಂಸತ್ತಿನಲ್ಲಿ ಮತದಾರರ ಪಟ್ಟಿಯ ಬಗ್ಗೆ ವಿವರವಾದ ಚರ್ಚೆಗೆ ಆಗ್ರಹಿಸುತ್ತದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa