ರಾಯಚೂರು, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ 2025ರ ಮಾ.10ರ ಸೋಮವಾರ ನಡೆದ ದ್ವಿತೀಯ ಪಿಯುಸಿ-01ರ ಲೆಕ್ಕಶಾಸ್ತ್ರ ವಿಷಯದ ಪರೀಕ್ಷೆಯಲ್ಲಿ ಒಟ್ಟು 177 ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ.
ಜಿಲ್ಲೆಯ 49 ಕೇಂದ್ರಗಳಲ್ಲಿ ಲೆಕ್ಕಶಾಸ್ತ್ರ ವಿಷಯದಲ್ಲಿ ಒಟ್ಟು 4072 ನೋಂದಣೆಯಾಗಿದ್ದು, 3886 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿಯಾಗಿದ್ದಾರೆ. 177 ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್