ರನ್ಯಾರಾವ್‌ ಪ್ರಕರಣ : ಸಮಗ್ರ ತನಿಖೆಯಾಗಲಿ-ಬೊಮ್ಮಾಯಿ
ನವದೆಹಲಿ, 10 ಮಾರ್ಚ್ (ಹಿ.ಸ.) : ಆ್ಯಂಕರ್ : ಚಿತ್ರನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಮಾಡಿರುವ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು ನಮ್ಮ ಅವಧಿಯಲ್ಲಿ ರನ್ಯಾ ರಾವ್‌ ನಿರ್ದೇಶಕಿಯಾದ ಕಂಪನಿಗೆ ಜಮೀನು ನೀಡಿರುವುದು ಮುಖ್ಯಮಂತ್ರಿಯ ಹಂತದವರೆಗೂ ಬಂದಿರುವು
Bommayi


ನವದೆಹಲಿ, 10 ಮಾರ್ಚ್ (ಹಿ.ಸ.) :

ಆ್ಯಂಕರ್ : ಚಿತ್ರನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಮಾಡಿರುವ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು ನಮ್ಮ ಅವಧಿಯಲ್ಲಿ ರನ್ಯಾ ರಾವ್‌ ನಿರ್ದೇಶಕಿಯಾದ ಕಂಪನಿಗೆ ಜಮೀನು ನೀಡಿರುವುದು ಮುಖ್ಯಮಂತ್ರಿಯ ಹಂತದವರೆಗೂ ಬಂದಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿರಾ ಕೈಗಾರಿಕಾ ಪ್ರದೇಶದಲ್ಲಿ ಮೆ. ಕ್ಸಿರೋಡಾ ಇಂಡಿಯಾ ಪ್ರೈ. ಲಿ. ಸಂಸ್ಥೆಗೆ ಜಮೀನು ನೀಡಿದ್ದೇವೆ. ಆ ಕಂಪನಿಯಲ್ಲಿ ಈಗ ಆರೋಪಿತೆಯಾಗಿರುವ ರನ್ಯಾ ರಾವ್ ಅವರು ನಿರ್ದೇಶಕಿಯಾದ್ದಾರೆ. ಯಾರೇ ಉದ್ದಿಮೆ ಮಾಡುತ್ತೇವೆ ಎಂದು ಬಂದರೂ ನಾವು ಅವರಿಗೆ ಅಗತ್ಯ ಕರಾರುಗಳನ್ನು ಹಾಕುತ್ತೇವೆ. ಲ್ಯಾಂಡ್ ಆಡಿಟ್ ಕಮಿಟಿ ಅಂತ ಇರುತ್ತದೆ. ಆ ಸಮಿತಿಯಲ್ಲಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ಇರುತ್ತಾರೆ. ಅವರು ಸಂಬಂಧಪಟ್ಟ ಕಂಪನಿಗೆ ಎಷ್ಟು ಜಮೀನು ಬೇಕು, ಯಾವ ಭಾಗದಲ್ಲಿ ಜಮೀನು ಬೇಕಿದೆ ಎನ್ನುವುದನ್ನು ಪರಿಶೀಲಿಸಿ ಶಿಫಾರಸು ಮಾಡುತ್ತಾರೆ. 500 ಕೋಟಿ ರೂ ಗಳ ವರೆಗಿನ ಯೋಜನೆಗಳಿಗೆ ಸಂಬಂಧಪಟ್ಟ ಮಂತ್ರಿಗಳ ಹಂತದಲ್ಲಿ ತೀರ್ಮಾನ ಆಗುತ್ತದೆ. ಮುಖ್ಯಮಂತ್ರಿಯವರೆಗೂ ಬರುವುದಿಲ್ಲ. ನನ್ನ ಹಂತದವರೆಗೂ ಅದು ಬಂದಿಲ್ಲ. ಕೈಗಾರಿಕಾ ಸಚಿವರ ನೇತೃತ್ವದಲ್ಲಿ ಸಿಂಗಲ್‌ ವಿಂಡೊ ಪ್ರೊಸಿಡಿಂಗ್ ಮೂಲಕ ಹಂಚಿಕೆ ಮಾಡುತ್ತಾರೆ. ಅವರಿಗೆ ಜಮೀನು ಹಂಚಿಕೆ ಮಾಡಿದ ಮೇಲೆ ಅವರಿಗೆ ಹಣ ಕಟ್ಟುವಂತೆ ನೊಟೀಸ್ ನೀಡಲಾಗಿದೆ. ಅವರು ಹಣ ಕಟ್ಟದಿರುವುದರಿಂದ ಅವರಿಗೆ ಭೂಮಿ ಹಂಚಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಉದ್ದಿಮೆ ಸ್ಥಾಪಿಸಲು ಹಲವಾರು ಅರ್ಜಿಗಳು ಬಂದಾಗ ರಾಜ್ಯದ 'ಅಭಿವೃದ್ಧಿ ದೃಷ್ಟಿಯಿಂದ ಉದ್ಯಮಗಳಿಗೆ ಜಮೀನು ನೀಡುತ್ತೇವೆ. ಈಗಿನ ಸರ್ಕಾರವೂ ಕೂಡ ಲಕ್ಷಾಂತರ ಕೋಟಿ ರೂ. ಜಮೀನು ಹಂಚಿಕೆ ಮಾಡಿರುತ್ತದೆ. ಯಾರೋ ಮುಂದೆ ಅಪರಾಧ ಮಾಡುತ್ತಾರೆ ಎಂದು ಯಾರಿಗೂ ಗೊತ್ತಿರುವುದಿಲ್ಲ. ಅದನ್ನು ಊಹೆ ಮಾಡಲು ಆಗುವುದಿಲ್ಲ. ನಟಿ ದುಬೈನಿಂದ ಅಕ್ರಮವಾಗಿ ಚಿನ್ನ ತಂದಿರುವ ಬಗ್ಗೆ ತನಿಖೆ ನಡೆಯುತ್ತಿದೆ. ಎಲ್ಲ ಆಯಾಮದಿಂದಲೂ ತನಿಖೆ ನಡೆಯಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande