ರನ್ಯಾರಾವ್ ಹಿಂದಿರುವ ಸಚಿವರ ಮಾಹಿತಿ ನೀಡಲು ವಿಜಯೇಂದ್ರ ಆಗ್ರಹ
ಬೆಂಗಳೂರು, 10 ಮಾರ್ಚ್ (ಹಿ.ಸ.) : ಆ್ಯಂಕರ್ : ರನ್ಯಾರಾವ್ ಚಿನ್ನ ಕಳ್ಳ ಸಾಗಣೆ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ
Byv


ಬೆಂಗಳೂರು, 10 ಮಾರ್ಚ್ (ಹಿ.ಸ.) :

ಆ್ಯಂಕರ್ : ರನ್ಯಾರಾವ್ ಚಿನ್ನ ಕಳ್ಳ ಸಾಗಣೆ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿನ್ನ ಕಳ್ಳಸಾಗಣೆ ಹಿನ್ನೆಲೆಯಲ್ಲಿ ಬಂಧಿತರಾದ ರನ್ಯಾರಾವ್ ಹಿಂದೆ ಅನೇಕ ಘಟಾನುಘಟಿಗಳಿದ್ದಾರೆ ಎಂಬ ಅಂಶ ಹೊರಕ್ಕೆ ಬರುತ್ತಿದೆ. ಇದೇನೂ ಸಣ್ಣ ಘಟನೆಯಲ್ಲ; ರನ್ಯಾರಾವ್ ಕಳೆದ ಕೆಲವು ತಿಂಗಳುಗಳಲ್ಲಿ 30ಕ್ಕೂ ಹೆಚ್ಚು ಬಾರಿ ದುಬೈ ಸೇರಿದಂತೆ ಬೇರೆ ಬೇರೆ ದೇಶಗಳಿಗೆ ಹೋಗಿ ಬಂದ ಮಾಹಿತಿ ಹೊರಬಿದ್ದಿದೆ. ಪ್ರತಿ ಬಾರಿಯೂ ಬೆಂಗಳೂರಿಗೆ ಮರಳಿ ಬಂದಾಗ ಸಂಪೂರ್ಣವಾದ ಪ್ರೊಟೊಕಾಲ್ ವ್ಯವಸ್ಥೆ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ರನ್ಯಾರಾವ್ ಒಬ್ಬ ಹಿರಿಯ ಐಪಿಎಸ್ ಅಧಿಕಾರಿಯ ಮಗಳು ವಿದೇಶದಿಂದ ವಿಮಾನ ನಿಲ್ದಾಣಕ್ಕೆ ವಾಪಸ್ ಬಂದಾಗ ವಿಮಾನನಿಲ್ದಾಣದಿಂದ ಪೊಲೀಸರೇ ಬೆಂಗಾವಲು ನೀಡಿ ಕರೆದೊಯ್ಯುತ್ತಿದ್ದರು, ಆಕೆ ಸಾಮಾನ್ಯ ಮಹಿಳೆ ಅಲ್ಲ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದರು.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಶಿಷ್ಡಾಚಾರ ಸಿಗುತ್ತದೆ ಭದ್ರತಾ ತಪಾಸಣೆ ಆಗುವುದಿಲ್ಲ ಎಂದಾದರೆ, ಇದರ ಹಿಂದೆ ಕೆಲವು ಘಟಾನುಘಟಿಗಳಿದ್ದಾರೆ, ಅಲ್ಲದೇ ಕೆಲವು ಸಚಿವರಿದ್ದಾರೆ ಎಂಬುದು ಕೂಡ ಹೊರಕ್ಕೆ ಬರುತ್ತಿದೆ ಎಂದು ತಿಳಿಸಿದರು.

ಈಗಾಗಲೇ ಸಿಬಿಐ, ಇ.ಡಿ. ತನಿಖೆ ನಡೆಯುತ್ತಿದೆ ಎಂದರು. ಈ ಗಂಭೀರ ಪ್ರಕರಣದ ಹಿಂದಿರುವವರ ಮಾಹಿತಿ ಮುಖ್ಯಮಂತ್ರಿಗಳಿಗೆ ಇದ್ದೇ ಇರುತ್ತದೆ ಎಂದ ಅವರು, ಕಳ್ಳ ಸಾಗಣೆ ಹಿಂದೆ ಇರುವ ಹವಾಲಾ ನಿರತರು, ಚಿನ್ನದ ಕಳ್ಳಸಾಗಾಟದ ಮಾಫಿಯಾಗಳು, ಇಂಥ ವ್ಯಕ್ತಿಗಳಿಗೆ ಬೆಂಬಲ ಕೊಟ್ಟ ರಾಜಕಾರಣಿಗಳು, ಮಂತ್ರಿಗಳು, ಮಾಜಿ ಮಂತ್ರಿಗಳು, ಶಾಸಕರು, ಮಾಜಿ ಶಾಸಕರು ಯಾರೆಂಬುದನ್ನು ಮುಖ್ಯಮಂತ್ರಿ ಬಹಿರಂಗಪಡಿಸಲಿ ಎಂದು ಒತ್ತಾಯಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande