ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಪ್ರಕರಣ ನಿರ್ವಹಣೆಗೆ ಶೀಘ್ರವೇ ಪ್ರತ್ಯೇಕ ಠಾಣೆ
ಹೊಸಪೇಟೆ, 11 ಮಾರ್ಚ್ (ಹಿ.ಸ.) : ಆ್ಯಂಕರ್ : ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳ ನಿರ್ವಹಣೆಗೆ ಶೀಘ್ರದಲ್ಲಿ ವಿಜಯನಗರದಲ್ಲಿ ಪ್ರತ್ಯೇಕ ಠಾಣೆಯನ್ನು ಆರಂಭಿಸಲು ಕ್ರಮವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದ
ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಪ್ರಕರಣ ನಿರ್ವಹಣೆಗೆ ಶೀಘ್ರವೇ ಪ್ರತ್ಯೇಕ ಠಾಣೆ ಆರಂಭ.


ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಪ್ರಕರಣ ನಿರ್ವಹಣೆಗೆ ಶೀಘ್ರವೇ ಪ್ರತ್ಯೇಕ ಠಾಣೆ ಆರಂಭ.


ಹೊಸಪೇಟೆ, 11 ಮಾರ್ಚ್ (ಹಿ.ಸ.) :

ಆ್ಯಂಕರ್ : ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳ ನಿರ್ವಹಣೆಗೆ ಶೀಘ್ರದಲ್ಲಿ ವಿಜಯನಗರದಲ್ಲಿ ಪ್ರತ್ಯೇಕ ಠಾಣೆಯನ್ನು ಆರಂಭಿಸಲು ಕ್ರಮವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರತಿಬಂಧ 1995 ನಿಯಮ 17ರ ಪ್ರಕಾರ ನಡೆಯುವ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದರು. ದೌರ್ಜನ್ಯ ಕಾಯ್ದೆಯಡಿ ಮೂರು ತಿಂಗಳ ಅವಧಿಯಲ್ಲಿ ಕೂಡ್ಲಿಗಿ ತಾಲೂಕಿನಲ್ಲಿ 3 ಪ್ರಕರಣಗಳು, ಹೊಸಪೇಟೆ, ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಹಡಗಲಿ ತಾಲೂಕಿನಲ್ಲಿ ತಲಾ 1 ಪ್ರಕರಣ ಸೇರಿ ಒಟ್ಟು 7 ಪ್ರಕರಣಗಳು ದಾಖಲಾಗಿವೆ. ಹರಪನಹಳ್ಳಿ ತಾಲೂಕಿನ 1 ಪ್ರಕರಣ ಹೊರತುಪಡಿಸಿ ಉಳಿದೆಲ್ಲ ಪ್ರಕರಣಗಳಲ್ಲಿ ಚಾರ್ಜ್ ಶೀಟ್ ಆಗಿವೆ. ಕೇವಲ 1 ಪ್ರಕರಣ ಮಾತ್ರ ತನಿಖೆ ಹಂತದಲ್ಲಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು.ಬಿ.ಎಲ್. ಮಾತನಾಡಿ, ಮೊಬೈಲ್ ಹಾವಳಿಯಿಂದಾಗಿ ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಪೋಕ್ಸೋದಂತಹ ಪ್ರಕರಣಗಳು ಹೆಚ್ಚಾಗಲು ಪ್ರಮುಖ ಕಾರಣವಾಗಿದೆ. ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹಕ್ಕೆ ಈಗಲೂ ಉತ್ತೇಜನ ನೀಡುತ್ತಿರುವುದು ಶೋಚನೀಯ. ಎಷ್ಟೋ ಪ್ರಕರಣಗಳು ಸರ್ಕಾರಿ ಆಸ್ಪತ್ರೆಗೆ ಹೆರಿಗೆಗೆ ಬಂದ ವೇಳೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿವೆ.

ನಿಗದಿತ ವಯೋಮಿತಿ ಇಲ್ಲದೇ ಹೆಣ್ಣು ಮಕ್ಕಳಿಗೆ ವಿವಾಹಕ್ಕೆ ಮುಂದಾಗುತ್ತಿರುವುದು ಅಪರಾಧವಾಗಿದೆ. ಕೌಟುಂಬಿಕವಾಗಿ ಒಪ್ಪಿಯೇ ಮದುವೆ ಮಾಡಿದ್ದರೂ ಪೋಕ್ಸೋ ಪ್ರಕರಣ ದಾಖಲಿಸಲು ಯಾವುದೇ ರಾಜಿ ಮಾಡಲು ಸಾಧ್ಯವೇ ಇಲ್ಲ. ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಪೋಕ್ಸೋ ಬಗ್ಗೆ ಜನಜಾಗೃತಿ ಈಗಾಗಲೇ ಮೂಡಿಸಿದ್ದರು. ಬಾಲ್ಯ ವಿವಾಹಗಳು ನಡೆಯುತ್ತಲೇ ಇವೆ. ಸಾರ್ವಜನಿಕರ ಸಹಕಾರದಿಂದ ಮಾತ್ರವೇ ಕಡಿವಾಣ ಸಾಧ್ಯವಾಗಿದೆ. ಮೊಬೈಲ್ ಬಳಕೆಯಿಂದ ಮಕ್ಕಳನ್ನು ದೂರವಿಡಲು ಪಾಲಕರು ಹೆಚ್ಚು ನಿಗಾವಹಿಸಬೇಕಿದೆ ಎಂದರು.

ಈ ವೇಳೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande