ರಾಯಚೂರು, 11 ಮಾರ್ಚ್ (ಹಿ.ಸ.):
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಇತ್ತಿಚೀಗೆ ಜಿಲ್ಲೆಯ ದೇವದುರ್ಗದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬೇಟಿ ಬಚಾವೋ, ಬೇಟಿ ಪಢಾವೋ ಸರಣಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
ಈ ವೇಳೆ ಹಿರಿಯ ಮೇಲ್ವಿಚಾರಕಿಯಾದ ಲಕ್ಷಿ್ಮೀ ರಾಠೋಡ್ ಅವರು ಮಾತನಾಡಿ, ಹೆಣ್ಣು ಮಕ್ಕಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಿಗುವ ಯೋಜನೆಗಳನ್ನು ಸರಿಯಾಗಿ ಬಹಳಸಿಕೊಳ್ಳಬೇಕು. ಮಹಿಳೆಯರು ಈ ದೇಶದ ಆಸ್ತಿ ಕೇಂದ್ರ ಸರ್ಕಾರದ ಬೇಟಿ ಬಚಾವೋ, ಬೇಟಿ ಪಢಾವೋ ಕಾರ್ಯಕ್ರಮದಿಂದ ಮಹಿಳೆಯರು ಆರ್ಥಿಕವಾಗಿ ಸದೃಢವಾಗಬೇಕೆಂದರು.
ವಿದ್ಯೆಯಿಂದ ಜೀವನ ಸುಂದರ ಆಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಸರಿಯಾಗಿ ವಿದ್ಯಾಭ್ಯಾಸ ಮಾಡಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಮಾಡಬೇಕಾದ ಜವಾಬ್ದಾರಿ ಪೋಷಕರ ಮೇಲಿದೆ. ಮಕ್ಕಳನ್ನು ಬಾಲ ಕಾರ್ಮಿಕ ಪದ್ಧತಿಗೆ ದೂಡಬೇಡಿ. ಇದು ಕಾನೂನು ಪ್ರಕಾರ ಅಪರಾಧ. ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳಿ ಎಂದು ಸಲಹೆ ಮಾಡಿದರು.
ಈ ವೇಳೆ ಗಿರಿಜವ್ವ ಅವರು ಮಾತನಾಡಿ, ಬೇಟಿ ಬಚಾವೋ, ಬೇಟಿ ಪಢಾವೋ ಯೋಜನೆಯ ಉದ್ದೇಶ ಹೆಣ್ಣು ಶಿಶುಹತ್ಯೆ ತಡೆಯುವುದಾಗಿದೆ. ಪ್ರತಿ ಹೆಣ್ಣು ಮಗುವಿನ ಸುರಕ್ಷತೆ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಹೊಸ ಯೋಜನೆಗಳನ್ನು ಅಭಿವೃದ್ಧಿಪಡಿಸಿ, ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು, ಹೆಣ್ಣು ಮಕ್ಕಳ ಲಿಂಗ ಅನುಪಾತದಲ್ಲಿನ ಕುಸಿತ ತಡೆಯುವುದು ಯೋಜನೆಯ ಮತ್ತೊಂದು ಪ್ರಮುಖ ಗುರಿಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ದೇವದುರ್ಗದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಗುರುಗಳಾದ ಮಹಾದೇವ, ಮಿಷನ್ ಶಕ್ತಿ ಜಿಲ್ಲಾ ಸಂಯೋಜಕ ಬಾವಸಲಿ, ಹಿರಿಯ ಮೇಲ್ವಿಚಾರಕಿ ನಿರ್ಮಲಾ ದೇವಿ, ಅಂಗನವಾಡಿ ಕಾರ್ಯಕರ್ತೆ ಸುರೇಖ, ಜಿಲ್ಲಾ ಮಕ್ಕಳ ಸಹಾಯವಾಣಿ ಅಧಿಕಾರಿ ತಿಕ್ಕಯ್ಯ, ಶಿಕ್ಷಕಿಯಾದ ಕಲ್ಪನಾ ಪಾಟೀಲ್ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್