ವಿ.ವಿ ಗಳನ್ನು ಮುಚ್ಚುವುದು ರೈತರ ಪಾಲಿಗೆ ಮರಣಶಾಸನ:ಬಿಜೆಪಿ
ಬೆಂಗಳೂರು, 11 ಮಾರ್ಚ್ (ಹಿ.ಸ.): ಆ್ಯಂಕರ್: ಸುಸಜ್ಜಿತವಾದ ಕೃಷಿ ವಿಶ್ವವಿದ್ಯಾಲಯಗಳನ್ನು ಮುಚ್ಚುವುದರಿಂದ ಉತ್ತರ ಕರ್ನಾಟಕ ಭಾಗದ ರೈತರಿಗೆ ಸಮಸ್ಯೆಯಾಗಲಿದೆ ರಾಜ್ಯ ಬಿಜೆಪಿ ಘಟಕ ಹೇಳಿದೆ. ರೈತರು ವಿಶ್ವವಿದ್ಯಾಲಯಗಳ ಅಧ್ಯಯನ, ಸಹಕಾರ, ವೈಜ್ಞಾನಿಕ ಮಾಹಿತಿಗೆ ಅನುಗುಣವಾಗಿ ತೋಟಗಾರಿಕಾ ಬೆಳೆಗಳನ್ನು ಬೆಳೆ
Bjp


ಬೆಂಗಳೂರು, 11 ಮಾರ್ಚ್ (ಹಿ.ಸ.):

ಆ್ಯಂಕರ್:

ಸುಸಜ್ಜಿತವಾದ ಕೃಷಿ ವಿಶ್ವವಿದ್ಯಾಲಯಗಳನ್ನು ಮುಚ್ಚುವುದರಿಂದ ಉತ್ತರ ಕರ್ನಾಟಕ ಭಾಗದ ರೈತರಿಗೆ ಸಮಸ್ಯೆಯಾಗಲಿದೆ ರಾಜ್ಯ ಬಿಜೆಪಿ ಘಟಕ ಹೇಳಿದೆ.

ರೈತರು ವಿಶ್ವವಿದ್ಯಾಲಯಗಳ ಅಧ್ಯಯನ, ಸಹಕಾರ, ವೈಜ್ಞಾನಿಕ ಮಾಹಿತಿಗೆ ಅನುಗುಣವಾಗಿ ತೋಟಗಾರಿಕಾ ಬೆಳೆಗಳನ್ನು ಬೆಳೆದು ಯಶಸ್ಸು ಕಂಡಿದ್ದಾರೆ. ಹೀಗಾಗಿ ಈ ವಿವಿಗಳನ್ನು ಮುಚ್ಚುವುದು ರೈತರ ಪಾಲಿಗೆ ಮರಣಶಾಸನವಾಗಲಿದೆ.

ತೋಟಗಾರಿಕಾ ವಿಶ್ವವಿದ್ಯಾಲಯದ ಹಲವು ಹುದ್ದೆಗಳು ಖಾಲಿ ಉಳಿದಿವೆ. ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಅಧ್ಯಾಪಕರಿಗೆ ಕಾರ್ಮಿಕರ ಕಾನೂನಿನನ್ವಯ ನಿಯಮದಡಿ ವೇತನ ಪಾವತಿಸುತ್ತಿಲ್ಲ. ಹಾಗಾಗಿ ಅವರ ವೇತನವನ್ನು ಸಹ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande