ಕಲಬುರಗಿ, 11 ಮಾರ್ಚ್ (ಹಿ.ಸ.) :
ಆ್ಯಂಕರ್ : ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಬೇಕು, ಗ್ರಾಮದಲ್ಲಿ ಅವಶ್ಯಕತೆ ಇರೋ ಕಡೆ ಸಣ್ಣ ನೀರಿನ ಟ್ಯಾಂಕ್ ನಿರ್ಮಿಸುವುದು ಸೇರಿದಂತೆ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಲಕಟ್ಟಿ ಗ್ರಾಮದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಎಸ್‌ಯುಸಿಐ ಸಂಘಟನೆ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಮುಂದೆ ಮಹಿಳೆಯರು ಖಾಲಿ ಕೊಡ ಹಿಡಿದು ಪ್ರತಿಭಟನೆ ಮಾಡಿದರು. ಬೇಸಿಗೆ ಆರಂಭವಾದರೂ ಸಹ ಅಧಿಕಾರಿಗಳು ನೀರು ಸರಬರಾಜು ಬಗ್ಗೆ ಗಮನ ಹರಿಸುತ್ತಿಲ್ಲ, ಈ ಬಗ್ಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಮನಕ್ಕೆ ತಂದೂ ಯಾವುದೇ ಪ್ರಯೋಜವಾಗಿಲ್ಲ, ಕೂಡಲೇ ನೀರಿನ ಸಮಸ್ಯೆ ಬಗೆಹರಿಸಲು ಮುಂದಾಗದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa