ದೆಹಲಿ ಕೊಳೆಗೇರಿಯಲ್ಲಿ ಬೆಂಕಿ ಅವಘಡ, 3 ಸಾವು
ನವದೆಹಲಿ, 11 ಮಾರ್ಚ್ (ಹಿ.ಸ.) : ಆ್ಯಂಕರ್ : ದೆಹಲಿಯ ಕರ್ಕಾರ್ಡೂಮಾ ನಲ್ಲಿರುವ ಕೊಳಚೆ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಅವಘಡದಲ್ಲಿ ಮೂವರು ಸಜೀವ ದಹನವಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಎರಡು ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂ
ದೆಹಲಿ ಕೊಳೆಗೇರಿಯಲ್ಲಿ ಬೆಂಕಿ ಅವಘಡ, 3 ಸಾವು


ನವದೆಹಲಿ, 11 ಮಾರ್ಚ್ (ಹಿ.ಸ.) :

ಆ್ಯಂಕರ್ : ದೆಹಲಿಯ ಕರ್ಕಾರ್ಡೂಮಾ ನಲ್ಲಿರುವ ಕೊಳಚೆ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಅವಘಡದಲ್ಲಿ ಮೂವರು ಸಜೀವ ದಹನವಾಗಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಎರಡು ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು.

ಘಟನೆಯಲ್ಲಿ ಉತ್ತರಪ್ರದೇಶ ಮೂಲದ, ಜಗ್ಗಿ (34), ಶ್ಯಾಮ್ ಸಿಂಗ್ (36) ಮತ್ತು ಜಿತೇಂದ್ರ (35) ಮೃತಪಟ್ಟಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ಕುರಿತು ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande