ಬೆಂಗಳೂರು, 11 ಮಾರ್ಚ್ (ಹಿ.ಸ.) :
ಆ್ಯಂಕರ್ : ವಿಧಾನ ಸೌಧದಲ್ಲಿ ಸಂಚಾರಿ ಆರೋಗ್ಯ ಘಟಕ ವಾಹನಗಳ ಉದ್ಘಾಟನೆಗೂ ಮುನ್ನ ಅವುಗಳ ಕಾರ್ಯನಿರ್ವಹಣೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರಿಶೀಲಿಸಿದರು.
ಕಟ್ಟಡ ಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ ಈ ವಾಹನಗಳನ್ನು ತಯಾರಿಸಲಾಗಿದ್ದು, ಪ್ರಮುಖವಾಗಿ ಈ ಸಂಚಾರಿ ಆರೋಗ್ಯ ಘಟಕಗಳಲ್ಲಿ ಇಸಿಜಿ ಪರೀಕ್ಷೆ, ಬಿಪಿ ಪರೀಕ್ಷೆ, ರಕ್ತ ಪರೀಕ್ಷೆ ಸೇರಿದಂತೆ ಹಲವು ಆರೋಗ್ಯ ಸೇವೆಯನ್ನು ನೀಡಲಾಗುತ್ತದೆ.
ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa