ಕಲಬುರಗಿ, 11 ಮಾರ್ಚ್ (ಹಿ.ಸ.) :
ಆ್ಯಂಕರ್ : ಸಾಲಬಾದೆ ತಾಳಲಾರದೆ ರೈತನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಎಲೆನಾವದಗಿ ಗ್ರಾಮದಲ್ಲಿ ನಡೆದಿದೆ.
ಅಶೋಕ ಸುತಾರ (40) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಈತ ಬ್ಯಾಂಕ್ ಹಾಗೂ ಇತರೆ ಖಾಸಗಿ ಸಂಸ್ಥೆಗಳಲ್ಲಿ ಸಾಲ ಮಾಡಿದ್ದ ಎನ್ನಲಾಗಿದೆ. ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa