ಕೊಪ್ಪಳ, 11 ಮಾರ್ಚ್ (ಹಿ.ಸ.) :
ಆ್ಯಂಕರ್ : ಗಂಗಾವತಿಯಲ್ಲಿ ಮಾರ್ಚ್ 27 ಮತ್ತು 28ರಂದು ನಡೆಯಲಿರುವ ಕೊಪ್ಪಳ ಜಿಲ್ಲಾ 13ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಲಿಂಗಾರೆಡ್ಡಿ ಆಲೂರು ಅವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್ ಅವರು ತಿಳಿಸಿದ್ದಾರೆ.
ಕೊಪ್ಪಳ ನಗರದ ಗಾಣಿಗೇರ ಸಮುದಾಯ ಭವನದಲ್ಲಿ ನಡೆದ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಜಿಲ್ಲೆಯ ತಾಲ್ಲೂಕುಗಳಿಂದ ಸಾಹಿತ್ಯಕ, ಸಾಂಸ್ಕøತಿಕ ವಲಯದಲ್ಲಿ ಸೇವೆ ಸಲ್ಲಿಸಿದ ಹಲವರನ್ನು ಸಮ್ಮೇಳನ ಅಧ್ಯಕ್ಷರನ್ನಾಗಿ ಮಾಡುವಂತೆ ಶಿಫಾರಸ್ಸು ಬಂದವು. ಆದರೆ ಸುಧೀರ್ಘ ಚರ್ಚೆಯ ಬಳಿಕ ಲಿಂಗಾರೆಡ್ಡಿ ಆಲೂರು ಅವರನ್ನು ಸರ್ವಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್