ಬೆಂಗಳೂರು, 11 ಮಾರ್ಚ್ (ಹಿ.ಸ.):
ಆ್ಯಂಕರ್:
ಕಾರ್ಮಿಕರ ಕೆಲಸದ ಸ್ಥಳಗಳಲ್ಲೇ ಅವರ ಆರೋಗ್ಯ ತಪಾಸಣೆ ಮಾಡುವುದು ಇದೊಂದು ವಿನೂತನ ಕಾರ್ಯಕ್ರಮ. ತೆಲಂಗಾಣ ಮತ್ತು ಒಡಿಶಾ ರಾಜ್ಯದ ಕಾರ್ಮಿಕ ಇಲಾಖೆ ಅಧಿಕಾರಿಗಳು ನಮ್ಮ ಸಂಚಾರಿ ಆರೋಗ್ಯ ಘಟಕಗಳ ಸೇವೆಯ ಬಗ್ಗೆ ಅಧ್ಯಯನ ಮಾಡಿದ್ದಾರೆ. ಅವರ ರಾಜ್ಯದಲ್ಲೂ ಅಳವಡಿಕೆ ಮಾಡಲು ಮುಂದಾಗಿದ್ದಾರೆ. ಇದೇ ನಮ್ಮ ಕಾರ್ಯಕ್ರಮದ ವಿಶೇಷತೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಸಂಚಾರಿ ಆರೋಗ್ಯ ಘಟಕದ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಳ್ಳು ದಾಖಲೆ ನೀಡಿ ಮಂಡಳಿಯಲ್ಲಿ ನೋಂದಾಯಿಸಿ ಸೌಲಭ್ಯ ಪಡೆಯುತ್ತಿದ್ದ ಸುಮಾರು ಇಪ್ಪತ್ತೇಳು ಸಾವಿರ ನಕಲಿ ಕಾರ್ಮಿಕರನ್ನು ಪತ್ತೆ ಹಚ್ಚಿ ಅವರಿಂದ ಕಾರ್ಮಿಕ ಕಾರ್ಡ್ ಗಳನ್ನು ಮರಳಿ ಪಡೆದಿದ್ದೇವೆ. ಈ ನಕಲಿ ಕಾರ್ಮಿಕರ ಪತ್ತೆ ಪ್ರಕ್ರಿಯೆ ಮುಂದೆಯೂ ನಡೆಯಲಿದೆ. ಅರ್ಹ ಕಾರ್ಮಿಕರಿಗೆ ಮಾತ್ರವೇ ಸರ್ಕಾರದ ಸೌಲಭ್ಯಗಳು ಸಿಗುವಂತಾಗಬೇಕು ಎಂಬುದೇ ನಮ್ಮ ಉದ್ದೇಶ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa