ನವದೆಹಲಿ, 11 ಮಾರ್ಚ್ (ಹಿ.ಸ.) :
ಆ್ಯಂಕರ್ : ಮಾರ್ಚ್ 13 ರಂದು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಒಂದು ದಿನ ಲೋಕ ಸಭೆ ಮತ್ತು ರಾಜ್ಯ ಸಭೆಯ ಕಲಾಪಗಳು ನಡೆಯುವುದಿಲ್ಲ. ಉಭಯ ಸದನಗಳ ವ್ಯವಹಾರ ಸಲಹಾ ಸಮಿತಿಗಳು ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಂಡಿವೆ.
ರಾಜ್ಯ ಸಭಾ ಸಚಿವಾಲಯ ಹೊರಡಿಸಿದ ಪ್ರಕಟಣೆಯಲ್ಲಿ, ವ್ಯವಹಾರ ಸಲಹಾ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಲಾಗಿದೆ ಮತ್ತು ಮಾರ್ಚ್ 13, ಗುರುವಾರ ನಿಗದಿಯಾಗಿದ್ದ ರಾಜ್ಯಸಭಾ ಸಭೆ ಕಲಾಪ ನಡೆಯುವುದಿಲ್ಲ ಎಂದು ಸದನದಲ್ಲಿ ಘೋಷಿಸಲಾಗಿದೆ ಎಂದು ಸದಸ್ಯರಿಗೆ ತಿಳಿಸಲಾಗಿದೆ. ಅದೇ ರೀತಿ, ಲೋಕ ಸಭೆಯ ವ್ಯವಹಾರ ಸಲಹಾ ಸಮಿತಿಯು ಮಾರ್ಚ್ 13 ರಂದು ಸದನದ ಕಲಾಪ ನಡೆಸದಿರಲು ನಿರ್ಧರಿಸಿದೆ ಎಂದು ತಿಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa