ಪಂಜಾಬ್‌ ಸರ್ಕಾರದಿಂದ ಶಿಕ್ಷಣದಲ್ಲಿ ರಾಜಕೀಯ: ಬಿಜೆಪಿ
ನವದೆಹಲಿ, 11 ಮಾರ್ಚ್ (ಹಿ.ಸ.): ಆ್ಯಂಕರ್: ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಸರ್ಕಾರವು ತನ್ನ ರಾಜಕೀಯ ಹಿತಾಸಕ್ತಿಗಳಿಗಾಗಿ ರಾಜ್ಯದ ಶಿಕ್ಷಣ ವ್ಯವಸ್ಥೆ ಮತ್ತು ಮಕ್ಕಳ ಭವಿಷ್ಯದ ಜೊತೆ ಆಟವಾಡುತ್ತಿದೆ ಎಂದು ಭಾರತೀಯ ಜನತಾ ಪಕ್ಷ ಆರೋಪಿಸಿದೆ. ರಾಜಕೀಯ ಹಿತಾಸಕ್ತಿಗಳಿಗಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ಪಣಕ್ಕ
Bjp


ನವದೆಹಲಿ, 11 ಮಾರ್ಚ್ (ಹಿ.ಸ.):

ಆ್ಯಂಕರ್:

ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಸರ್ಕಾರವು ತನ್ನ ರಾಜಕೀಯ ಹಿತಾಸಕ್ತಿಗಳಿಗಾಗಿ ರಾಜ್ಯದ ಶಿಕ್ಷಣ ವ್ಯವಸ್ಥೆ ಮತ್ತು ಮಕ್ಕಳ ಭವಿಷ್ಯದ ಜೊತೆ ಆಟವಾಡುತ್ತಿದೆ ಎಂದು ಭಾರತೀಯ ಜನತಾ ಪಕ್ಷ ಆರೋಪಿಸಿದೆ. ರಾಜಕೀಯ ಹಿತಾಸಕ್ತಿಗಳಿಗಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ಪಣಕ್ಕಿಡುವುದನ್ನು ಯಾವುದೇ ಸಂದರ್ಭದಲ್ಲೂ ಸಹಿಸಲಾಗುವುದಿಲ್ಲ ಎಂದು ಪಕ್ಷ ಹೇಳಿದೆ. ರಾಜ್ಯದಲ್ಲಿ ಶಿಕ್ಷಣದಲ್ಲಿ ರಾಜಕಾರಣ ನಿಲ್ಲಬೇಕು, ಇಲ್ಲದಿದ್ದರೆ ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು,

ಎಎಪಿ ಸರ್ಕಾರ ಪಂಜಾಬ್‌ಗೆ ಒಂದೇ ಒಂದು ಹೊಸ ಕೆಲಸವನ್ನೂ ಮಾಡಿಲ್ಲ, ಇಡೀ ರಾಜ್ಯವನ್ನು ಹಾಳು ಮಾಡಿ, ಮಕ್ಕಳ ಭವಿಷ್ಯದ ಜೊತೆ ಆಟವಾಡುತ್ತಿದೆ ಎಂದು ಆರೋಪಿಸಿದ್ದಾರೆ. ಪಂಜಾಬ್ ಮಂಡಳಿಯ 12 ನೇ ತರಗತಿಯ ರಾಜ್ಯಶಾಸ್ತ್ರ ಪರೀಕ್ಷೆಯಲ್ಲಿ ಕೇಳಲಾದ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಅವರು ಎಎಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಪರೀಕ್ಷೆಯಲ್ಲಿ 'ಆಮ್ ಆದ್ಮಿ ಪಕ್ಷದ ಸರ್ಕಾರದ ನೀತಿಗಳನ್ನು ವಿವರಿಸಿ ಎಂಬ ಪ್ರಶ್ನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಶಿಕ್ಷಣದಲ್ಲಿ ರಾಜಕಾರಣ ನಿಲ್ಲಿಸಬೇಕು ಇಲ್ಲವಾದಲ್ಲಿ ಸರಕಾರಕ್ಕೆ ಪಂಜಾಬ್ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande