ಬೆಂಗಳೂರು, 11 ಮಾರ್ಚ್ (ಹಿ.ಸ.):
ಆ್ಯಂಕರ್:
ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರ ನಟಿ ರನ್ಯಾರಾವ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಲ್ಪಟ್ಟಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ರನ್ಯಾರಾವ್ ಗೆ ಜಾಮೀನು ನೀಡದಂತೆ
ಡಿಆರ್ ಇ ಇಲಾಖೆ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa