ಸಮಾಜದ ಏಳಿಗೆಗಾಗಿ ಮಹಿಳೆಯರ ಪಾತ್ರ ಬಹುಮುಖ್ಯ: ಅಮ್ಜದ್ ಪಟೇಲ್
ಕೊಪ್ಪಳ, 11 ಮಾರ್ಚ್ (ಹಿ.ಸ.) ಆ್ಯಂಕರ್: ಪ್ರಸ್ತುತ ದಿನಮಾನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಿದ ಕೆಲಸ ಕಾರ್ಯಗಳಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ತಿಳಿಸಿದ್ದಾರೆ. ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲ
ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ: ಅಮ್ಜದ್ ಪಟೇಲ್


ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ: ಅಮ್ಜದ್ ಪಟೇಲ್


ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ: ಅಮ್ಜದ್ ಪಟೇಲ್


ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ: ಅಮ್ಜದ್ ಪಟೇಲ್


ಕೊಪ್ಪಳ, 11 ಮಾರ್ಚ್ (ಹಿ.ಸ.)

ಆ್ಯಂಕರ್:

ಪ್ರಸ್ತುತ ದಿನಮಾನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಿದ ಕೆಲಸ ಕಾರ್ಯಗಳಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಜೀಂ ಪ್ರೇಮಜೀ ಫೌಂಡೇಷನ್, ಭಾಗ್ಯನಗರದ ವಾಸವಿ ಕ್ಲಬ್ ಹಾಗೂ ಪಾನಘಂಟಿ ಫೌಂಡೇಷನ್ ಇವರುಗಳ ಸಹಯೋಗದಲ್ಲಿ ಮಂಗಳವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಪ್ರಪ್ರಥಮವಾಗಿ ಮಹಿಳೆಯರ ಶಿಕ್ಷಣಕ್ಕಾಗಿ ಹೋರಾಡಿದ ಮಹಿಳೆ ಸಾವಿತ್ರಿ ಬಾಯಿ ಪುಲೆ ಅವರಾಗಿದ್ದು, ಮಹಿಳೆಯರು ತಮ್ಮ ಜೀವನದಲ್ಲಿ ಸಾವಿತ್ರಿ ಬಾಯಿ ಪುಲೆ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಸಮಾಜದ ಪರಿವರ್ತನೆ, ಅಭಿವೃದ್ಧಿಗೆ ಶ್ರಮಿಸಬೇಕು. ಮಹಿಳೆಯರು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಅಭಿವೃದ್ಧಿ ಹೊಂದಿದರೆ ಮಾತ್ರ ಈ ದೇಶ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ, ಪ್ರಪಂಚದಲ್ಲಿ ಮಹಿಳೆಯರು ಕೆಲಸ ಕಾರ್ಯಗಳಲ್ಲಿ ವಹಿಸುವ ಶ್ರಮ ಹೆಚ್ಚಿದೆ. ಮನೆಯಲ್ಲಿನ ಕೆಲಸ ಕಾರ್ಯಗಳಿಂದ ಮಕ್ಕಳ ಶಿಕ್ಷಣ, ಮನೆಯ ಜವಬ್ದಾರಿ ಮಹಿಳೆಯರ ಮೇಲಿದೆ. ನಮ್ಮ ದೇಶದಲ್ಲಿನ ಪ್ರತಿ ಅಂಗನವಾಡಿಗಳಲ್ಲಿ 3 ರಿಂದ 6 ವರ್ಷದ ಮಕ್ಕಳ ಲಾಲನೆ-ಪಾಲನೆ, ಮಕ್ಕಳ ಶಿಕ್ಷಣ, ಚಿಕ್ಕ ಮಕ್ಕಳು ದೈಹಿಕವಾಗಿ ಸದೃಢರಾಗಿ ಬೆಳೆಯಲು ಅಂಗನವಾಡಿ ಕಾರ್ಯಕರ್ತೆಯರ ಹೆಚ್ಚಿನ ಜವಾಬ್ದಾರಿ ಇರುತ್ತದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್ ದರಗದ ಅವರು, ಶರಣರ ವಚನಗಳಲ್ಲಿ ಹೆಣ್ಣುಮಕ್ಕಳ ಶ್ರಮ ಮತ್ತು ಕೆಲಸ ಕಾರ್ಯಗಳ ಕುರಿತು ವರ್ಣಿಸಲಾಗಿದೆ. ಮಹಿಳೆಯರು ಆರ್ಥಿಕವಾಗಿ ಮುಂದುವರೆಯಲು ಉದ್ಯೋಗದ ಅವಶ್ಯಕತೆ ಮುಖ್ಯವಾಗಿದೆ. ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಸಮಾಜದ ಪರಿವರ್ತನೆಗೆ ಮಹಿಳೆಯರ ಪಾತ್ರ ಪ್ರಮುಖವಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರು ಮಾತನಾಡಿ, ಮಹಿಳೆಯರ ಶಕ್ತಿ ಆಗಾಧವಿದೆ. ರಾಜ್ಯ ಸರ್ಕಾರವು ಪ್ರಸುತ್ತ ವರ್ಷದ ಹಣಕಾಸು ಆಯವ್ಯಯದಲ್ಲಿ ಮಹಿಳೆಯರ ಅಭಿವೃದ್ಧಿಗೆ ಒತ್ತು ನೀಡಿ ಮಹಿಳೆಯರ ಸ್ವ ಸಹಾಯ ಸಂಘಗಳಿಂದ ಸಾಲ ಪಡೆದು ವಿವಿಧ ಉದ್ಯಮಗಳಲ್ಲಿ ತೊಡಗಿ ಆರ್ಥಿಕವಾಗಿ ಸಧೃಡರಾಗಲು ಸಹಾಯಕವಾಗಿದೆ ಎಂದರು.

ಪ್ರಶಸ್ತಿ ಪ್ರಧಾನ ಸಮಾರಂಭ:

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ಯ ವಿವಿಧ ಕೇತ್ರಗಳಲ್ಲಿ ಸಾಧನಗೈದ ಮಕ್ಕಳಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಇಲಾಖೆಯಡಿಯಲ್ಲಿ ಅತ್ಯುತ್ತಮ ಕೆಲಸ ಕಾರ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಅಂಗನವಾಡಿ ಸಹಾಯಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ರಂಗೋಲಿ ಸ್ಪರ್ಧೆ:

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಮಹಿಳಾ ಮತ್ತು ಮಕ್ಕಳ ಉಪನಿರ್ದೇಶಕ ಪರುಶುರಾಮ ವೈ ಶೆಟ್ಟೆಪ್ಪನವರ್, ಜಿಲ್ಲಾ ನಿರೂಪಣಾಧಿಕಾರಿ ಗಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತೇಶ ಪೂಜಾರ್, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ಹರೀಶ ಜೋಗಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಯೋಜನಾಧಿಕಾರಿ ಅನ್ನಪೂರ್ಣ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande