ಸಾಂಬಾದ ಅಂತಾರಾಷ್ಟ್ರೀಯ ಗಡಿಯಲ್ಲಿ ಅನುಮಾನಾಸ್ಪದ ಚಲನವಲನ
ಜಮ್ಮು, 11 ಮಾರ್ಚ್ (ಹಿ.ಸ.) : ಆ್ಯಂಕರ್ : ಜಮ್ಮು ವಿಭಾಗದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿರುವ ಘಗ್ವಾಲ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದಾರೆ. ಅಧಿಕೃತ ಮೂಲಗಳ ಪ್ರಕಾರ, ರಾತ್ರ
Bsf


ಜಮ್ಮು, 11 ಮಾರ್ಚ್ (ಹಿ.ಸ.) :

ಆ್ಯಂಕರ್ : ಜಮ್ಮು ವಿಭಾಗದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿರುವ ಘಗ್ವಾಲ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ, ರಾತ್ರಿ1 ಗಂಟೆ ಸುಮಾರಿಗೆ, ಘಗ್ವಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಎಸ್‌ಎಫ್ ಕೇಂದ್ರ ಗಡಿಯ ಬಳಿ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ, ಭದ್ರತಾ ಪಡೆ ಸಿಬ್ಬಂದಿ ಹಲವಾರು ಸುತ್ತು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ‌ ಸಂಭವಿಸಿಲ್ಲ.

ಬಿಎಸ್‌ಎಫ್ ಡಿಐಜಿ ಸೇರಿದಂತೆ ಹಿರಿಯ ಬಿಎಸ್‌ಎಫ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande