ನವದೆಹಲಿ, 11 ಮಾರ್ಚ್ (ಹಿ.ಸ.) :
ಆ್ಯಂಕರ್ : ರಾಜ್ಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸದನದ ನಾಯಕ ಜೆ.ಪಿ. ನಡ್ಡಾ ನಡುವೆ ಬಿಸಿ ಚರ್ಚೆ ನಡೆಯಿತು. ಉಪಸಭಾಪತಿ ಹರಿವಂಶ ನಾರಾಯಣ್ ಅವರು ಖರ್ಗೆ ಅವರನ್ನು ಮಾತನಾಡದಂತೆ ತಡೆದಾಗ, ಇಲ್ಲಿ ಸರ್ವಾಧಿಕಾರ ನಡೆಯುತ್ತಿದೆ ಎಂದು ಖರ್ಗೆ ಆರೋಪಿಸಿದರು.
ಈ ವೇಳೆ ಖರ್ಗೆ ಸರಕಾರದ ವಿರುದ್ಧ ಆಕ್ಷೇಪಾರ್ಹ ಪದ ಬಳಕೆಗೆ ಸಿಟ್ಟಿಗೆದ್ದ ಜೆ.ಪಿ.ನಡ್ಡಾ ಖರ್ಗೆಯವರನ್ನು ತರಾಟೆಗೆ ತೆಗೆದುಕೊಂಡರು. ನಂತರ ಖರ್ಗೆ ಸಭಾಪತಿಯವರಲ್ಲಿ ಕ್ಷಮೆಯಾಚಿಸಿದ ನಂತರ ಪರಿಸ್ಥಿತಿ ತಿಳಿಯಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa