ಕಲಬುರಗಿ, 11 ಮಾರ್ಚ್ (ಹಿ.ಸ.) :
ಆ್ಯಂಕರ್ : ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ಬಿ ವೈ ವಿಜಯೇಂದ್ರ ಅಭಿಮಾನಿ ಬಳಗದ ಅಧ್ಯಕ್ಷ ವಿಜಯಕುಮಾರ್ ಮಾಡ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಕಲಬುರಗಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಸವನಗೌಡ ಪಾಟೀಲ್ ಯತ್ನಾಳ ಅವರು ನಮ್ಮ ನಾಯಕರಾದ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರ ಬಗ್ಗೆ ಹಾದಿ ಬೀದಿಯಲ್ಲಿ ಹಗುರವಾಗಿ ಮಾತನಾಡುವುದು ಸರಿಯಲ್ಲ. ಯಡಿಯೂರಪ್ಪ ಅವರು ಪ್ರಭಾವಿ ನಾಯಕರಾಗಿದ್ದು, ಅನೇಕರಿಗೆ ರಾಜಕೀಯ ಜೀವನವನ್ನು ಕಟ್ಟಿಕೊಟ್ಟಿದ್ದಾರೆ. ಅವರ ಮೇಲೆ ವೈಯಕ್ತಿಕ ದ್ವೇಶ ಸಾಧಿಸುವ ದುರುದ್ದೇಶದಿಂದ ಈ ರೀತಿ ವರ್ತಿಸುವುದು ಸರಿಯಾದ ಬೆಳವಣಿಗೆ ಅಲ್ಲ. ಯತ್ನಾಳ ಅವರು ಇದೆ ರೀತಿ ಬಾಯಿ ಹರಿಬಿಟ್ಟರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಟಿಯಲ್ಲಿ ಅಭಿಮಾನಿ ಬಳಗದ ಬಸವರಾಜ್ ಬಿಸ್ತಾ, ಗುರು ಪಾಟೀಲ್, ಸಂಗಮನಾಥ ರೆಡ್ಡಿ, ಸಂಜೀವಕುಮಾರ್, ವಿಷ್ಟುಕಾಂತ ಮೂಲಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa