ರಾಯಚೂರು: ಮಾ.೧೫ರಂದು ಬೃಹತ್ ಆರೋಗ್ಯ ಮೇಳ
ರಾಯಚೂರು, 11 ಮಾರ್ಚ್ (ಹಿ.ಸ.) ಆ್ಯಂಕರ್: ಜಿಲ್ಲಾಡಳಿತದ ವತಿಯಿಂದ ಮಾ.15ರಂದು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಬೃಹತ್ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಮೇಳದ ಯಶಸ್ವಿಗೆ ಸಂಬಂಧಿಸಿದ ಅಧಿಕಾರಿಗಳು ಶ್ರಮಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ
ರಾಯಚೂರು: ಬೃಹತ್ ಆರೋಗ್ಯ ಮೇಳ ಯಶಸ್ವಿಗೆ ಶ್ರಮಿಸಿ; ಜಿಲ್ಲಾಧಿಕಾರಿ ನಿತೀಶ್ ಕೆ


ರಾಯಚೂರು: ಬೃಹತ್ ಆರೋಗ್ಯ ಮೇಳ ಯಶಸ್ವಿಗೆ ಶ್ರಮಿಸಿ; ಜಿಲ್ಲಾಧಿಕಾರಿ ನಿತೀಶ್ ಕೆ


ರಾಯಚೂರು, 11 ಮಾರ್ಚ್ (ಹಿ.ಸ.)

ಆ್ಯಂಕರ್:

ಜಿಲ್ಲಾಡಳಿತದ ವತಿಯಿಂದ ಮಾ.15ರಂದು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಬೃಹತ್ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಮೇಳದ ಯಶಸ್ವಿಗೆ ಸಂಬಂಧಿಸಿದ ಅಧಿಕಾರಿಗಳು ಶ್ರಮಿಸಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ನೂತನ ಕಚೇರಿಯಲ್ಲಿ ಬೃಹತ್ ಆರೋಗ್ಯ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆರೋಗ್ಯ ಮೇಳ ಆಯೋಜನೆಗೆ ಕಡಿಮೆ ಸಮಯವಿದ್ದು, ಸಂಬಂಧಿಸಿದ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು. ಮೇಳಕ್ಕೆ ಆಗಮಿಸುವ ಜನರಿಗೆ ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಕ್ರಮವಹಿಸಿಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅಂದು ಬೆಳಿಗ್ಗೆ 10ಗಂಟೆಗೆ ಜಿಲ್ಲೆಯ ಮಾನ್ವಿ ಪಟ್ಟಣದ ಬಾಶುಮಿಯ ಸಾಹುಕಾರ ಪ್ರಥಮ ದರ್ಜೆ ಪದವಿ ಕಾಲೇಜ್ ಆವರಣದಲ್ಲಿ ಬೃಹತ್ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಮೇಳದಲ್ಲಿ ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞರು, ಶಸ್ತ್ರ ಚಿಕಿತ್ಸೆಕರು, ಎಲಬು ಮತ್ತು ಕೀಳು ತಜ್ಞರು, ಕಿವಿ ಮೂಗು ಗಂಟಲು ತಜ್ಞರು, ಮಾನಸಿಕ ಆರೋಗ್ಯ ತಜ್ಞರು, ಶ್ವಾಸಕೋಶ ತಜ್ಞರು, ವೈದ್ಯಕೀಯ ತಜ್ಞರು, ನೇತ್ರ ತಜ್ಞರು, ಚರ್ಮರೋಗ ತಜ್ಞರು, ದಂತವೈದ್ಯರು, ಮತ್ತು ತಜ್ಞರು, ಹೃದಯ ರೋಗ ತಜ್ಞರು, ನರರೋಗ ತಜ್ಞರು, ಕಿಡ್ನಿ ರೋಗ ತಜ್ಞರು, ಕ್ಯಾನ್ಸರ್ ರೋಗ ತಜ್ಞರು, ಯಕೃತ್ತ ಮತ್ತು ಪಿತ್ತ ಜನಕಾಂಗ ತಜ್ಞರು, ಭಾರತೀಯ ವೈದ್ಯ ಪದ್ಧತಿಯ ತಜ್ಞರು ಸೇರಿದಂತೆ ವಿವಿಧ ತಜ್ಞರು ವೈದ್ಯರು ಭಾಗವಹಿಸಲಿದ್ದಾರೆ.

ಅಲ್ಲದೆ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್, ಎಕ್ಸರೇ, ರಕ್ತ ಪರೀಕ್ಷೆ, ಇಸಿಜಿ ಪರೀಕ್ಷೆ ಇಕೋ ಪರೀಕ್ಷೆಗಳನ್ನು ಉಚಿತವಾಗಿ ಮಾಡಿ, ಉಚಿತವಾಗಿ ಔಷಧಗಳನ್ನು ನೀಡಲಾಗುವುದು ಈ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಮಟ್ಟದಲ್ಲಿ ಸ್ಥಳೀಯ ಸಂಸ್ಥೆಗಳು ಜಾಗೃತಿ ಮೂಡಿಸಬೇಕೆಂದರು.

ಆರೋಗ್ಯ ಮೇಳದಲ್ಲಿ 200ಕ್ಕೂ ಹೆಚ್ಚು ವಿಶೇಷ ತಜ್ಞರು; ಮಾನವಿ ಪಟ್ಟಣದಲ್ಲಿ ಬೃಹತ್ ಆರೋಗ್ಯ ಮೇಳ ಶಿಬಿರಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಸುಮಾರು ಐದು ಸಾವಿರಕ್ಕೂ ಹೆಚ್ಚು ರೋಗಿಗಳು ಬರುವ ನಿರೀಕ್ಷೆಯಿದ್ದು, ಶಿಬಿರದಲ್ಲಿ 200ಕ್ಕೂ ಹೆಚ್ಚು ವಿಶೇಷ ತಜ್ಞ ವೈದ್ಯರಿಂದ ರೋಗಿಗಳ ಉಪಚಾರ ಮಾಡಲಿದ್ದಾರೆ ಜೊತೆಗೆ ರಾಯಚೂರು ವೈದ್ಯಕೀಯ ಮಹಾವಿದ್ಯಾಲಯ, ಓಪೆಕ್ ಆಸ್ಪತ್ರೆ, ನವೋದಯ ವೈದ್ಯಕೀಯ ಮಹಾವಿದ್ಯಾಲಯ, ನವೋದಯ ದಂತ ಮಹಾವಿದ್ಯಾಲಯ, ಎಎಂಇ ದಂತ ಮಹಾವಿದ್ಯಾಲಯ, ಕೆ.ಪಿ.ಎಸ್.ವಿ.ಎಸ್ ಮಹಾವಿದ್ಯಾಲಯ, ಐಎಂಎ, ದೃಷ್ಟಿ ಕಣ್ಣಿನ ಆಸ್ಪತ್ರೆ, ಎಂ.ಎಂ ಜೋಶಿ ಕಣ್ಣಿನ ಆಸ್ಪತ್ರೆ ಹಾಗೂ ವಿವಿಧ ಸಂಘಗಳು ಸಹಕಾರ ನೀಡಲಿವೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಂ ಪಾಂಡ್ವೆ, ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ರಾಯಚೂರು ವಿಭಾಗದ ಸಹಾಯಕ ಆಯುಕ್ತರಾದ ಗಜಾನನ ಬಾಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ರಿಮ್ಸ್ ನಿರ್ದೇಶಕರಾದ ಡಾ.ರಮೇಶ, ಓಪೆಕ್ ಆಸ್ಪತ್ರೆಯ ಡಾ.ರಮೇಶ ಸಾಗರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ವಿಜಯಶಂಕರ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕಾಳಪ್ಪ ಬಡಿಗೇರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗಪ್ಪ ನಾಯಕ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಕುಷ್ಠರೋಗ ನಿವಾರಣೆ ಅಧಿಕಾರಿ ಡಾ.ಯಶೋಧ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಕುಮಾರ, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ.ಮಹ್ಮದ್ ಶಾಕೀರ ಮೊಹಿಯುದ್ದೀನ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಇತರ ಸಂಸ್ಥೆಯ ಮುಖ್ಯಸ್ಥರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande