ಭಾರತಕ್ಕೆ 265 ರನ್‌ಗಳ ಗುರಿ ನೀಡಿದ ಆಸ್ಟ್ರೇಲಿಯಾ
ದುಬೈ, 04 ಮಾರ್ಚ್ (ಹಿ.ಸ.) : ಆ್ಯಂಕರ್ : ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಸ್ಟೀವ್‌ ಸ್ಮಿತ್ ಹಾಗೂ ಅಲೆಕ್ಸ್ ಕ್ಯಾರಿ ಅರ್ಧ ಶತಕದ ಸಹಾಯದಿಂದ ಆಸ್ಟ್ರೇಲಿಯಾ ತಂಡವು ಭಾರತಕ್ಕೆ 265 ರನ್‌ಗಳ ಗುರಿ ನೀಡಿದೆ. ಮೊದಲ ಸೆಮಿಫೈನಲ್‌ ಪಂದ್ಯದಲ್
Cricket


ದುಬೈ, 04 ಮಾರ್ಚ್ (ಹಿ.ಸ.) :

ಆ್ಯಂಕರ್ : ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಸ್ಟೀವ್‌ ಸ್ಮಿತ್ ಹಾಗೂ ಅಲೆಕ್ಸ್ ಕ್ಯಾರಿ ಅರ್ಧ ಶತಕದ ಸಹಾಯದಿಂದ ಆಸ್ಟ್ರೇಲಿಯಾ ತಂಡವು ಭಾರತಕ್ಕೆ 265 ರನ್‌ಗಳ ಗುರಿ ನೀಡಿದೆ. ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು 49.3 ಓವರ್‌ಗಳಲ್ಲಿ 264 ರನ್ ಗಳಿಸಿ ಸರ್ವ ಪತನ ಕಂಡಿತು. ತಂಡದ ಪರ ಸ್ಟೀವ್ ಸ್ಮಿತ್ 73 ರನ್, ಅಲೆಕ್ಸ್ ಕ್ಯಾರಿ 61 ರನ್ ಗಳಿಸಿದರು.

ಭಾರತದ ಪರ ಮೊಹಮ್ಮದ್ ಶಮಿ 3 ವಿಕೆಟ್‌ ಕಬಳಿಸಿದ್ದು, ರವೀಂದ್ರ ಜಡೇಜಾ ಹಾಗೂ ವರುಣ್ ಚಕ್ರವರ್ತಿ ತಲಾ 2 ವಿಕೆಟ್, ಅಕ್ಷರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಉರುಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande