ಬೆಂಗಳೂರು, 04 ಮಾರ್ಚ್ (ಹಿ.ಸ.) :
ಆ್ಯಂಕರ್ : ಬಜೆಟ್ ಅಧಿವೇಶನದ ಎರಡನೇ ದಿನವಾದ ಇಂದು ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷದ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ 2030ರ ವೇಳೆಗೆ 60ಲಕ್ಷ ಮನೆಗಳಿಗೆ ಪೈಪ್ ಲೈನ್ ಮೂಲಕ ಅಡುಗೆ ಅನಿಲ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಬೇರೆ ಬೇರೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ದರ ವ್ಯತ್ಯಾಸದಿಂದ ಮನೆಮನೆಗೆ ಗ್ಯಾಸ್ ಸಂಪರ್ಕ ಒದಗಿಸಲು ವಿಳಂಬವಾಗಿದೆ. ಈಗ ಈ ಸಮಸ್ಯೆ ಬಗೆಹರಿದಿದ್ದು, 2030ರೊಳಗೆ 60ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪೈಪ್-ಲೈನ್ ಮೂಲಕ ಅಡುಗೆಅನಿಲ ಪೂರೈಸಲಾಗುವುದು ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa