ಬೆಂಗಳೂರು, 04 ಮಾರ್ಚ್ (ಹಿ.ಸ.) :
ಆ್ಯಂಕರ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಹಲವು ವಿಚಾರಗಳ ಕುರಿತು ಚರ್ಚಿಸಿದರು.
ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಕುಮಾರ್ ರಾಷ್ಟ್ರೀಯ ಅಧ್ಯಕ್ಷರು ರಾಜ್ಯಕ್ಕೆ ಆಗಮಿಸಿದಾಗ ರಾಜ್ಯ ಅಧ್ಯಕ್ಷನಾಗಿ ಭೇಟಿ ಮಾಡುವುದು ಸಹಜ. ರಾಜ್ಯದಲ್ಲಿ ಪಕ್ಷದ ೧೦೦ ಕಚೇರಿಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆಗೆ ಸಮಯ ನೀಡುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa