ಸಿಂಧನೂರು - ಆರೋಗ್ಯ ಇಲಾಖೆಯಿಂದ ನೇರ ಸಂದರ್ಶನ
ಸಿಂಧನೂರು, 04 ಮಾರ್ಚ್ (ಹಿ.ಸ.) : ಆ್ಯಂಕರ್ : ಸಿಂಧನೂರು ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿವಿಧ ತಜ್ಞ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅ
ಸಿಂಧನೂರು - ಆರೋಗ್ಯ ಇಲಾಖೆಯಿಂದ ನೇರ ಸಂದರ್ಶನ


ಸಿಂಧನೂರು, 04 ಮಾರ್ಚ್ (ಹಿ.ಸ.) :

ಆ್ಯಂಕರ್ : ಸಿಂಧನೂರು ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿವಿಧ ತಜ್ಞ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಮಾರ್ಚ 10ರಿಂದ ಮಾರ್ಚ 12ರವರೆಗೆ ಹಮ್ಮಿಕೊಳ್ಳಲಾಗಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಸ್ತ್ರೀ-ರೋಗ ತಜ್ಞರು-02, ಅರವಳಿಕೆ-02, ಮಕ್ಕಳ ತಜ್ಞರು-02, ರೇಡಿಯೋಲಾಜಿಸ್ಟ್-01 ಹುದ್ದೆಗಳ ನೇಮಕಾತಿಗೆ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಅವಧಿಯಲ್ಲಿ ಸಂಪರ್ಕ ಮಾಡಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande