ಬೆಂಗಳೂರು, 04 ಮಾರ್ಚ್ (ಹಿ.ಸ.) :
ಆ್ಯಂಕರ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ರಾಗಿ, ಜೋಳ, ಭತ್ತದ ಗುಣಮಟ್ಟವನ್ನು ಕಾಪಾಡಬೇಕು. ಪ್ರತೀ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯೇ ಎಂ.ಎಸ್.ಪಿ.ಯ ಅಧ್ಯಕ್ಷರಾಗಿದ್ದು, ಆಹಾರ ಧಾನ್ಯಗಳ ಗುಣಮಟ್ಟದಲ್ಲಿ ವ್ಯತ್ಯಾಸವಿದ್ದಲ್ಲಿ ಸ್ಥಳದಲ್ಲಿಯೇ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa