ಚಿತ್ರರಂಗಕ್ಕೆ ಒಳ್ಳೆಯದಾಗಲಿ : ಡಿ.ಕೆ.ಶಿವಕುಮಾರ್
ಬೆಂಗಳೂರು, 04 ಮಾರ್ಚ್ (ಹಿ.ಸ.) : ಆ್ಯಂಕರ್ : ಚಿತ್ರರಂಗದ ನಟರ ಕುರಿತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆಗೆ ಚಿತ್ರರಂಗದ ಗಣ್ಯರಿಂದ ವಿರೋಧ ವ್ಯಕ್ತವಾಗಿರುವ ಕುರಿತು ಪ್ರತಿಕ್ರಿಯಿಸಿರುವ ಶಿವಕುಮಾರ್,ಚಿತ್ರ ರಂಗದವರು ಟೀಕೆ ಮ
Dks


ಬೆಂಗಳೂರು, 04 ಮಾರ್ಚ್ (ಹಿ.ಸ.) :

ಆ್ಯಂಕರ್ : ಚಿತ್ರರಂಗದ ನಟರ ಕುರಿತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ ಹೇಳಿಕೆಗೆ ಚಿತ್ರರಂಗದ ಗಣ್ಯರಿಂದ ವಿರೋಧ ವ್ಯಕ್ತವಾಗಿರುವ ಕುರಿತು ಪ್ರತಿಕ್ರಿಯಿಸಿರುವ ಶಿವಕುಮಾರ್,ಚಿತ್ರ ರಂಗದವರು ಟೀಕೆ ಮಾಡಲಿ ಎಂದು ತಾವು ನಟ್ಟು ಬೋಲ್ಟು ಪದ ಬಳಕೆ ಮಾಡಿದ್ದು ಎಂದಿದ್ದಾರೆ.

ಚಿತ್ರರಂಗಕ್ಕೆ ಒಳ್ಳೆಯದಾಗಲಿ ಎಂದು ಸರ್ಕಾರ ಅಂತಾರಾಷ್ಟ್ರೀಯ ಚಿತ್ರೋತ್ಸವ ಆಯೋಜಿಸಿದ್ದು. ಅವರೇ ಅದರಲ್ಲಿ ಭಾಗವಹಿಸದಿದ್ದರೆ ಹೇಗೆ ಎಂದು ಶಿವಕುಮಾರ್ ಪ್ರಶ್ನಿಸಿದ್ದಾರೆ.

ಚಿತ್ರರಂಗದವರಿಗೆ ಸಾಕಷ್ಟು ಸಹಾಯ ಮಾಡಿದ್ದೇನೆ. ಸಹಾಯ ಪಡೆದವರಿಗೆ ಅದು ಚೆನ್ನಾಗಿ ಗೊತ್ತಿದೆ. ಆಯೋಜನೆಯಲ್ಲಿ ಒಂದಷ್ಟು ತಪ್ಪುಗಳಾಗಿರಬಹುದು ಎಂದಿರುವ ಅವರು, ನಿರ್ದೇಶಕರು, ನಿರ್ಮಾಪಕರು ನೀಡಿರುವ ಹೇಳಿಕೆಗಳನ್ನು ಅಪಾರ್ಥ ಭಾವಿಸಲ್ಲ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande